ಡಿವೈಡರ್ ಮೇಲೇರಿ ನಿಂತ ಸರ್ಕಾರಿ ಬಸ್; ಪ್ರಯಾಣಿಕರು ಪಾರು
Monday, January 26, 2026
ಮಂಗಳೂರಿನಿOದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ನಿಂತ ಘಟನೆ ಸೋಮವಾರ ಬೆಳಗ್ಗಿನ ಜಾವ ಮಾಣಿಯ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಘಟನೆಯಿಂದ ಬಸ್‌ಗೆ ಭಾಗಶಃ ಹಾನಿಯಾಗಿದೆ. ಅತೀವೇಗದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.