ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರನ ಕಾರು ಚಾಲಕನಿಗೆ ಚೂರಿ ಇರಿತ
Wednesday, January 07, 2026
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಅವರ ಕಾರು ಚಾಲಕನಿಗೆ ದುಷ್ಕರ್ಮಿಗಳು ಚಾಕು ಇರಿದು ಪರಾರಿಯಾಗಿರುವ ಘಟನೆ ಬೆಂಗಳೂರಿನ ನಗರದ ಕ್ಲಬ್ ರಸ್ತೆಯಲ್ಲಿ ನಡೆದಿದೆ.
ಜ.6ರ ಮಧ್ಯಾಹ್ನ ಮೃಣಾಲ್ ಅವರ ಕಾರು ಚಾಲಕ, ಬೆಳಗಾವಿ ತಾಲೂಕಿನ ಬೆಳಗುಂದಿ ಗ್ರಾಮದ ನಿವಾಸಿ ಬಸವಂತ ಕಡೋಲ್ಕರ್(32) ಅವರಿಗೆ ಬೈಕ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಎದೆ, ಭುಜ, ತೊಡೆ ಸೇರಿ 4 ಕಡೆ ಚಾಕುವಿನಿಂದ ಇರಿದು ಪರಾರಿ ಆಗಿದ್ದಾರೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಬಸವಂತ ಅವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಹಿತಿ ತಿಳಿಯುತ್ತಿದ್ದಂತೆಯೇ ಮೃಣಾಲ್ ಅವರು ಆಸ್ಪತ್ರೆಗೆ ಭೇಟಿ, ಬಸವಂತ ಅವರ ಆರೋಗ್ಯ ವಿಚಾರಿಸಿದ್ದಾರೆ.