ಪರ್ಯಾಯ ಕಾರ್ಯಕ್ರಮದಲ್ಲಿ ಡಿಸಿ ಸ್ವರೂಪ ಭಾಗಿಯಾಗಿರುವುದಕ್ಕೆ ಅಪಸ್ವರ; ಡಿಸಿ ಸ್ಪಷ್ಟನೆ
Sunday, January 18, 2026
ಉಡುಪಿ ನಗರ ಸಭೆಯ ಆಡಳಿತಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಪರ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೇನೆಯೇ ಹೊರತು ಇದರಲ್ಲಿ ರಾಜಕೀಯ ಉದ್ದೇಶವಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಸ್ಪಷ್ಟಪಡಿಸಿದ್ದಾರೆ.
ಉಡುಪಿ ಪರ್ಯಾಯ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಅವರು ಭಾಗವಹಿರುವುದಕ್ಕೆ ಅಪಸ್ವರ ಕೇಳಿ ಬಂದಿತ್ತು.ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪ್ರಕಟಣೆ ಮೂಲಕ ಸ್ಪಷ್ಟಪಡಿಸಿದ್ದಾರೆ.
