-->
 ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತಗೊಂಡಿಲ್ಲ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತಗೊಂಡಿಲ್ಲ- ಸಿಎಂ ಸಿದ್ದರಾಮಯ್ಯ


ವಿಧಾನಮಂಡಲ ಅಧಿವೇಶನದಲ್ಲಿ ದ್ವೇಷಭಾಷಣ ಮಸೂದೆಯನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದ್ದು ರಾಜ್ಯಪಾಲರು ಇದನ್ನು ಮರಳಿಸಿಲ್ಲ, ತಿರಸ್ಕರಿಸಿಲ್ಲ ಅಥವಾ ಅಂಕಿತವನ್ನೂ ಹಾಕಿಲ್ಲ. ಒಂದು ವೇಳೆ ಅವರು ಸ್ಪಷ್ಟನೆ ಕೇಳಿದರೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾವು ಹಿಂದೆ ಕಾನೂನು ಬಾಹಿರ ಗಣಿಗಾರಿಕೆಯನ್ನು ವಿರೋಧಿಸಿ ಬೆಂಗಳೂರಿನಿAದ ಬಳ್ಳಾರಿಗೆ ಪಾದಯಾತ್ರೆ ಮಾಡಿದ್ದೆವು.  ಈ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆ ನಡೆದಾಗ ರೆಡ್ಡಿ ಸಹೋದರರು ಹಾಗೂ ಯಡಿಯೂರಪ್ಪ ಅವರು  ಸವಾಲು ಹಾಕಿದ್ದರು. ಅದಕ್ಕಾಗಿ ಪಾದಯಾತ್ರೆ ಕೈಗೊಳ್ಳಲಾಯಿತು. ಇವರು ಪಾದಯಾತ್ರೆ ಏಕೆ ಮಾಡಬೇಕು ಎಂದು ಪ್ರಶ್ನಿಸಿದರು.

ಬಳ್ಳಾರಿಯಲ್ಲಿ ಮಹರ್ಷಿ ವಾಲ್ಮೀಕಿ ಪ್ರತಿಮೆ ಉದ್ಘಾಟನೆ ಬಗ್ಗೆ ಹಾಕಿದ್ದ ಬ್ಯಾನರ್ ಅನ್ನು ತೆಗೆಯಬೇಕಾದ ಅಗತ್ಯವೇನಿತ್ತು? ಅದನ್ನುತೆಗೆದಿದ್ದೇ ಪ್ರಚೋದನೆ ಕಾರಣವಾಯಿತು. ಸ್ಥಾನ ಕಳೆದುಕೊಂಡಿದ್ದರಿAದ ಜನಾರ್ದನರೆಡ್ಡಿ, ಶ್ರೀರಾಮುಲು ಅವರು ಅಸೂಯೆಯಿಂದ ನಡೆದುಕೊಳ್ಳುತ್ತಿದ್ದಾರೆ ಎಂದರು. ಮುಖ್ಯಮಂತ್ರಿ ಹುದ್ದೆಗೆ ಕಾಳಗವೇ ಇಲ್ಲ. ಇದೆಲ್ಲಾ ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಉತ್ತರಿಸಿದರು.


Ads on article

Advertise in articles 1

advertising articles 2

Advertise under the article