ಡಿವೈಡರ್‌ಗೆ ಬೈಕ್ ಡಿಕ್ಕಿ; ಯುವಕ ಸಾವು
Saturday, January 10, 2026
ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದು ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಮಣಿಪಾಲ ಠಾಣಾ ವ್ಯಾಪ್ತಿಯ ಲಕ್ಷ್ಮೀಂದ್ರನಗರದ ಸುಧಾ ಫರ್ನಿಚರ್ ಬಳಿ ನಡೆದಿದೆ.
ಇಂದಿರಾನಗರದ ಬುಡ್ನಾರ್ ನಿವಾಸಿ ಪ್ರವೀಣ್ ಶೆಟ್ಟಿ(36) ಮೃತಪಟ್ಟ ಯುವಕ. ಉಡುಪಿಯಿಂದ ಮಣಿಪಾಲ ಕಡೆಗೆ ಅತೀ ವೇಗದಿಂದ ಬಂದ ಬೈಕ್ ಲಕ್ಷ್ಮೀಂದ್ರನಗರ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಬೈಕ್ ನಿಂದ ಕೆಳಗೆ ಬಿದ್ದ ಪ್ರವೀಣ್ ಶೆಟ್ಟಿ ಅವರ ತಲೆಗೆ ಗಂಭೀರ ಪೆಟ್ಟು ಬಿದ್ದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.