ಕಂಬಳದಲ್ಲಿ ಗೆದ್ದ ಕೋಣದ ಮಾಲಕರಿಗೆ ಹಣದ ಬೇಡಿಕೆ: ಮೂವರು ಆರೋಪಿಗಳ ವಿರುದ್ದ ಕೋಕಾ ಕಾಯ್ದೆ
Tuesday, January 13, 2026
ಮುಲ್ಕಿಯ ಅರಸು ಕಂಬಳದಲ್ಲಿ ಬಹುಮಾನ ಗೆದ್ದ ಕೋಣದ ಮಾಲಕರಿಗೆ ಹಣ ಹಾಗೂ ಬಂಗಾರದ ಸರ ನೀಡುವಂತೆ ಬೆದರಿಕೆ ಹಾಕಿ ಹಲ್ಲೆ ನಡೆಸಿರುವ ಮೂವರು ಆರೋಪಿಗಳ ವಿರುದ್ಧ ಕೋಕಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಅಂಗಾರಗುಡ್ಡೆ ಕೆಂಚನಕೆರೆ ನಿವಾಸಿ ಶಂಸುದ್ದೀನ್ ಅವರ ಮನೆಗೆ ನುಗ್ಗಿದ ಶ್ಯಾಮಸುಂದರ್ ಶೆಟ್ಟಿ, ಅಕ್ಷಯ್ ಪೂಜಾರಿ ಹಾಗೂ ಸುವೀನ್ ಕಾಂಚನ್ ಎಂಬ ಮೂವರು ಆರೋಪಿಗಳು ಬೆದರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು.
ಪ್ರಕರಣ ದಾಖಲಿಸಿಕೊಂಡ ಮುಲ್ಕಿ ಪೊಲೀಸರು ತನಿಖೆ ನಡೆಸಿ ಶ್ಯಾಮಸುಂದರ್ ಶೆಟ್ಟಿ, ಅಕ್ಷಯ್ ಪೂಜಾರಿ ಹಾಗೂ ಸುವೀನ್ ಕಾಂಚನ್ ಅವರನ್ನು ಬಂಧಿಸಿದ್ದಾರೆ.
ಬಂಧಿತರ ವಿರುದ್ಧ ಈಗಾಗಲೇ ಅನೇಕ ಪ್ರಕರಣಗಳು ದಾಖಲಾಗಿರುವ ಹಿನ್ನೆಲೆಯಲ್ಲಿ ಪೊಲೀಸರು KOC Act ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದುಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅವರು ಮಾಹಿತಿ ನೀಡಿದ್ದಾರೆ.