ಮಾನಸಿಕ ಅಸ್ವಸ್ಥನಿಂದ ಖಾಸಗಿ ಜಾಗಕ್ಕೆ ಬೆಂಕಿ: ತಪ್ಪಿದ ಭಾರಿ ಅನಾಹುತ
Tuesday, January 06, 2026
ಉಡುಪಿ ನಗರದ ಶ್ರೀ ಕೃಷ್ಣಮಠದ ಹಿಂಭಾಗದಲ್ಲಿರುವ ಗೋವಿಂದ ಪುಷ್ಕರಣಿ ಮಾರ್ಗದ ಖಾಸಗಿ ಜಾಗಕ್ಕೆ ಮಾನಸಿಕ ಅಸ್ವಸ್ಥನೋರ್ವ ಇಂದು ಮಧ್ಯಾಹ್ನ ಬೆಂಕಿ ಹಚ್ಚಿದ ಘಟನೆ ನಡೆದಿದೆ.
ಬೆಂಕಿ ಹಚ್ಚಿದ ಪರಿಣಾಮ ಖಾಲಿ ಜಾಗದೊಳಗೆ ಬೆಂಕಿ ವೇಗವಾಗಿ ಹರಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ಘಟನಾ ಸ್ಥಳದ ಸಮೀಪದಲ್ಲೇ ಶಾಲೆ ಹಾಗೂ ಹಲವು ಮನೆಗಳು ಇರುವುದರಿಂದ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು, ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡರು. ಸ್ಥಳೀಯ ಸಮಾಜಸೇವಕರ ಸಹಕಾರದಿಂದ ಬೆಂಕಿಯನ್ನು ಸಂಪೂರ್ಣವಾಗಿ ನಿಯಂತ್ರಿಸಲಾಯಿತು.
ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ದೊಡ್ಡ ಮಟ್ಟದ ಆಸ್ತಿನಷ್ಟ ಸಂಭವಿಸಿಲ್ಲ. ಸಮಯಕ್ಕೆ ಸರಿಯಾಗಿ ಕೈಗೊಂಡ ಕ್ರಮದಿಂದ ಭಾರಿ ಅನಾಹುತ ತಪ್ಪಿದ್ದು, ಸ್ಥಳೀಯರು ನಿಟ್ಟುಸಿರು ಬಿಡುವಂತಾಯಿತು. ಪೊಲೀಸರು ಘಟನೆಯ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ.



