ಶೀರೂರು ಪರ್ಯಾಯಕ್ಕೆ ಡಿಕೆ ಶಿವಕುಮಾರ್ ಅವರನ್ನು ಆಮಂತ್ರಿಸಿದ ಯಶ್ಪಾಲ್ ಸುವರ್ಣ
Saturday, January 10, 2026
ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಶೀರೂರು ಪರ್ಯಾಯದ ಆಮಂತ್ರಣ ಪತ್ರಿಕೆಯನ್ನು ಶಾಸಕ, ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಯಶ್ ಪಾಲ್ ಸುವರ್ಣ ಅವರು ನೀಡಿದರು.
ಮಂಗಳೂರಿನಲ್ಲಿ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾದ ಯಶ್ ಪಾಲ್ ಸುವರ್ಣ ಅವರು ಶಿರೂರು ಪರ್ಯಾಯಕ್ಕೆ ಆಹ್ವಾನಿಸಿದರು.
ಈ ಸಂದರ್ಭದಲ್ಲಿ ಡಿಕೆಶಿ ಅವರು ಪರ್ಯಾಯದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಇಚ್ಛೆಯನ್ನು ವ್ಯಕ್ತಪಡಿಸಿದರು. ಸ್ವಾಗತ ಸಮಿತಿ ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ ವಿಷ್ಣುಮೂರ್ತಿ ಆಚಾರ್ಯ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್ ಉಪಸ್ಥಿತರಿದ್ದರು.
