ಗ್ಯಾಸ್ ಸಿಲಿಂಡರ್ ಸ್ಫೋಟ; ಮನೆ ಗೋಡೆ, ವಸ್ತುಗಳೆಲ್ಲಾ ಛಿದ್ರ
Friday, January 16, 2026
ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾದ ಘಟನೆ ಕಾರ್ಕಳದ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ಸಂಭವಿಸಿದೆ. ಘಟನೆಯಲ್ಲಿ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ.
ಮುದ್ದಣ್ಣ ನಗರದ ವಾರಿಜಾ ಎಂಬವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದ್ದು, ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಪೀಠೋಪಕರಣ, ವಾಷಿಂಗ್ ಮಷೀನ್, ಪಾತ್ರೆಗಳು ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣ ಹಾನಿಗೊಂಡಿವೆ.
ಮನೆಯ ಹೊರಪಾರ್ಶ್ವದಲ್ಲಿ ಸ್ಫೋಟ ಸಂಭವಿಸಿದ್ದರಿAದ ಯಾರಿಗೂ ಹಾನಿಯಾಗಿಲ್ಲ. ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಸುಮಾರು 3 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ
