ಓವರ್ ಟೇಕ್ ಭರಾಟೆ: ಬಸ್ಸಿಗೆ ಬೈಕ್ ಡಿಕ್ಕಿ, ಸವಾರ ಸಾವು
Saturday, January 24, 2026
ಖಾಸಗಿ ಬಸ್ ಒಂದನ್ನು ಓವರ್ ಟೆಕ್ ಮಾಡುವ ಬರದಲ್ಲಿ ಬೈಕೊಂದು ಎದುರಿಗೆ ಬಂದ ಬಸ್ ಗೆ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಕುಂದಾಪುರದ ನೇರಳಕಟ್ಟೆಯ ಶೆಟ್ರಕಟ್ಟೆ ಜಂಕ್ಷನ್‌ನಲ್ಲಿ ಶನಿವಾರ ಬೆಳಿಗ್ಗೆ ಸಂಭವಿಸಿದೆ.
ಮೃತರನ್ನು ಸೌಕೂರು ನಿವಾಸಿ ವಿಜಯ್ ದೇವಾಡಿಗ ಎಂದು ಗುರುತಿಸಲಾಗಿದೆ. ತ್ರಾಸಿಯಲ್ಲಿ ಫಾಸ್ಟ್ ಫುಡ್ ಅಂಗಡಿ ನಡೆಸುತ್ತಿದ್ದ ವಿಜಯ್, ತ್ರಾಸಿಯಿಂದ ಸೌಕೂರು ಕಡೆಗೆ ತನ್ನ ಬೈಕ್ ನಲ್ಲಿ ಹೋಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಶೆಟ್ರಕಟ್ಟೆ ಜಂಕ್ಷನ್‌ನಲ್ಲಿ ಖಾಸಗಿ ಬಸ್ ಅನ್ನು ಹಿಂದಿಕ್ಕಲು ಪ್ರಯತ್ನಿಸುತ್ತಿದ್ದಾಗ, ವಿಜಯ್ ಎದುರು ಬರುತ್ತಿದ್ದ ಖಾಸಗಿ ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ದೃಶ್ಯ ಖಾಸಗಿ ಬಸ್ ನ ಡ್ಯಾಶ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
