ಕೊರಗ ಸಮುದಾಯದವರ ಬೇಡಿಕೆ ಬಗ್ಗೆ ಸಿಎಂ ಗಮನಕ್ಕೆ ತರುತ್ತೇನೆ; ಮಂಜುನಾಥ್ ಭಂಡಾರಿ ಭರವಸೆ
Tuesday, January 06, 2026
ಕೊರಗ ಸಮುದಾಯದ ಯುವ ಜನರಿಗೆ ಸರಕಾರಿ ಉದ್ಯೋಗ ನೇರ ನೇಮಕಾತಿಗೆ ಒತ್ತಾಯಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ವತಿಯಿಂದ ನಡೆಯುತ್ತಿರುವ ಅಹೋರಾತ್ರಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ಕೆಪಿಸಿಸಿ ಕಾರ್ಯಧ್ಯಕ್ಷ ಮಂಜುನಾಥ ಭಂಡಾರಿ ಭೇಟಿ ನೀಡಿದರು.
ಈವೇಳೆ ಅಲ್ಲಿನ ಸಮಸ್ಯೆ ಆಲಿಸಿದ ಮಂಜುನಾಥ್ ಭಂಡಾರಿ ಈ ಬಗ್ಗೆ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ಪರಿಹಾರ ಒದಗಿಸುವ ಭರವಸೆಯನ್ನು ನೀಡಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ಕಾರ್ಯಾಧ್ಯಕ್ಷರಾದ ಕಿಶನ್ ಹೆಗ್ಡೆ , ರಾಜ್ಯ ಆರ್ ಜಿ ಪಿ ಆರ್ ಎಸ್ ಸಂಘಟನೆಯ ಉಪಾಧ್ಯಕ್ಷರಾದ ರೋಶನಿ, ಬ್ರಹ್ಮವರ ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಡಾ. ಸುನಿತಾ ಶೆಟ್ಟಿ ಮೊದಲಾದವರು ಇದ್ದರು.


