-->
ಕಾರ್ಕಳ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಕಳ್ಳತನ

ಕಾರ್ಕಳ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಕಳ್ಳತನ


ಉಡುಪಿ ಜಿಲ್ಲೆಯ ಕಾರ್ಕಳದಲ್ಲಿರುವ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ಕಳ್ಳತನ ನಡೆದಿರುವ ಘಟನೆ ಬೆಳಕಿಗೆ ಬಂದಿದೆ.


ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ ಈ ಥೀಮ್ ಪಾರ್ಕ್, ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ  ನಿರ್ಮಾಣವಾಗಿತ್ತು

ರಾಜಕೀಯ ಕೆಸರೆರಚಾಟದಿಂದ ನೆನೆಗುದಿಗೆ ಬಿದ್ದಿದ್ದ ಯೋಜನಾ ಪ್ರದೇಶವು ಇತ್ತೀಚಿನ ವರ್ಷಗಳಲ್ಲಿ ಪಾಳುಬಿದ್ದಿದ್ದು, ಈ ಸಂದರ್ಭ ದುಷ್ಕರ್ಮಿಗಳು ಬಾಗಿಲು ಮುರಿದು ಒಳನುಗ್ಗಿ ಮೇಲ್ಚಾವಣಿಗೆ ಅಳವಡಿಸಿದ್ದ ತಾಮ್ರದ ಹೊದಿಕೆಗಳನ್ನು ಕಿತ್ತು ಕಳ್ಳತನ ಮಾಡಿದ್ದಾರೆ ಎನ್ನಲಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಸುನಿಲ್ ಕುಮಾರ್, ಕಾರ್ಕಳದ ಇತಿಹಾಸದಲ್ಲಿ ಇದೊಂದು ದುರ್ದಿನ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ಕಾಂಗ್ರೆಸ್ ಮುಖಂಡರ ದ್ವೇಷ ಹಾಗೂ ಅಸೂಯೆಯಿಂದ ಈ ಸ್ಥಿತಿ ಬಂದಿದೆ ಎಂದು ಆರೋಪಿಸಿದ ಅವರು, ಕಳೆದ ಎರಡು ವರ್ಷಗಳಿಂದ ಯೋಜನೆಗೆ ಒಂದು ಬಿಡಿ ಕಾಸು ಕೂಡ ಬಿಡುಗಡೆ ಆಗಿಲ್ಲ ಎಂದು ಆಕ್ಷೇಪಿಸಿದ್ದಾರೆ. ಪ್ರವಾಸೋದ್ಯಮಕ್ಕೆ ಮಹತ್ವದ ಕೊಡುಗೆ ನೀಡಬೇಕಾಗಿದ್ದ ಪರಶುರಾಮ ಥೀಮ್ ಪಾರ್ಕ್ ಇಂದು ಅನುದಾನ ಕೊರತೆಯಿಂದ ಪಾಳುಬಿದ್ದು ಕಳ್ಳತನಕ್ಕೂ ಗುರಿಯಾಗಿರುವುದು ಜಿಲ್ಲಾಡಳಿತದ ವೈಫಲ್ಯ ಎಂದು ಅವರು ಕಿಡಿಕಾರಿದ್ದಾರೆ.







Ads on article

Advertise in articles 1

advertising articles 2

Advertise under the article