ಉಡುಪಿ ಫುಲ್ ಮ್ಯಾರಥಾನ್ ಗೆ ಜಿಲ್ಲಾಧಿಕಾರಿ ಸ್ವರೂಪ ಚಾಲನೆ
Sunday, January 11, 2026
ಉಡುಪಿ ಜಿಲ್ಲಾಡಳಿತ, ಎನ್‌ಇಬಿ ಸ್ಪೋರ್ಟ್ಸ್ ಬೆಂಗಳೂರು ಮತ್ತು ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಶನ್ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಫುಲ್ ಮ್ಯಾರಥಾನ್ ಗೆ ಇಂದು ಬೆಳಿಗ್ಗೆ 4ಗಂಟೆಗೆ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸ್ವರೂಪ ಉದ್ಘಾಟಿಸಿದರು.
ಮ್ಯಾರಥಾನ್ ಸ್ಪರ್ಧೆಯು ಬೆಳಿಗ್ಗೆ 4 ಗಂಟೆಗೆ, ಹಾಫ್ ಮ್ಯಾರಥಾನ್ ಬೆಳಿಗ್ಗೆ 5.30ಕ್ಕೆ, 10 ಕಿ.ಮೀ. ಓಟ ಬೆಳಗ್ಗೆ 6.30ಕ್ಕೆ ಹಾಗೂ 5 ಕಿ.ಮೀ. ಫನ್ ರನ್ ಬೆಳಗ್ಗೆ 7.30ಕ್ಕೆ ಆರಂಭಗೊಂಡಿತು. ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ 3 ಕಿ.ಮೀ ಮತ್ತು 5 ಕಿ.ಮೀ ಓಟ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.ಬೆಳಿಗ್ಗೆ 9.30ಕ್ಕೆ ಅಜ್ಜರಕಾಡು ಕ್ರೀಡಾಂಗಣದಲ್ಲಿ ನಡೆದ ಬಹುಮಾನ ವಿತರಣಾ ಸಮಾರಂಭದಲ್ಲಿ ಜಿಲ್ಲಾಧಿಕಾರಿ ಸ್ವರೂಪ ಅವರು ವಿಜೇತರಿಗೆ ಬಹುಮಾನ ವಿತರಿಸಿದರು.ಮೊದಲ ಆರು ಸ್ಥಾನಗಳಿಗೆ ನಗದು ಬಹುಮಾನಗಳನ್ನು ನೀಡಲಾಯಿತು.
ಈ ವೇಳೆ ಉಡುಪಿ ಜಿಲ್ಲಾ ಅಮೆಚೂರು ಅಸೋಸಿಯೇಶನ್ ಅಧ್ಯಕ್ಷ ಹರಿಪ್ರಸಾದ್ ರೈ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ. ರೋಶನ್ ಶೆಟ್ಟಿ, ಮಾಜಿ ಶಾಸಕ ರಘುಪತಿ ಭಟ್,ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಯುವ ಕಾಂಗ್ರೆಸ್ ಮುಖಂಡ ರೋಷನ್ ಶೆಟ್ಟಿ ಮೊದಲದವರು ಉಪಸ್ಥಿತರಿದ್ದರು.


