-->
MGNREGA ಹೆಸರು ಕೈಬಿಟ್ಟ ಕೇಂದ್ರಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

MGNREGA ಹೆಸರು ಕೈಬಿಟ್ಟ ಕೇಂದ್ರಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ


ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ-MGNREGA ಹೆಸರು ಮತ್ತು ಅದರಲ್ಲಿದ್ದ ಜನಪರ ಅಂಶಗಳನ್ನು ಬದಲಾಯಿಸಿ VB-G RAM G ಎಂಬ ಹೆಸರನ್ನು ಮರುನಾಮಕರಣ ಮಾಡಿದ್ದನ್ನು ವಿರೋಧಿಸಿ ಕಾರ್ಮಿಕರ ಉದ್ಯೋಗದ ಹಕ್ಕನ್ನು ಕಸಿದುಕೊಂಡ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವತಿಯಿಂದ ಇಂದು 31ನೇ ಬೈಲೂರು ವಾರ್ಡಿನ ಮಿಷನ್ ಆಸ್ಪತ್ರೆಯ ವೃತ್ತದ ಬಳಿ ಪ್ರತಿಭಟನೆ ನಡೆಯಿತು.


ಈ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ  ಜ್ಯೋತಿ ಹೆಬ್ಬಾರ್ ಅವರು,ಹಿಂದಿನ ಉದ್ಯೋಗ ಖಾತರಿ ಯೋಜನೆಯನ್ನು ಮರು ಜಾರಿಗೊಳಿಸುವಂತೆ ಆಗ್ರಹಿಸಿದರು. ಅಲ್ಲದೇ ಪ್ರಸ್ತುತ ಜನವಿರೋಧಿ ನೀತಿ VB-G RAM Gಯನ್ನು ಕೈಬಿಡಬೇಕೆಂದು ಒತ್ತಾಯಿಸಿದ್ದು, ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಖಂಡಿಸಿದರು. 


ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಮಾತನಾಡಿ, ಕೇಂದ್ರ ಬಿಜೆಪಿ ಸರ್ಕಾರದ ಈ ರೀತಿಯ ಹುನ್ನಾರವನ್ನು ಜನಸಾಮಾನ್ಯರು ಸಹಿಸುವುದಿಲ್ಲ. ಕಾಂಗ್ರೆಸ್ ಪಕ್ಷವು ಬಡವರ ಪರವಿರುವ ಪಕ್ಷ. ಜನಸಾಮಾನ್ಯರಿಗೆ ನೆಮ್ಮದಿಯ ಬದುಕನ್ನು ಕಲ್ಪಿಸುವುದಕ್ಕಾಗಿ ಇಂತಹ ಜನಪರ ಯೋಜನೆಯನ್ನು ಜಾರಿಗೆ ತಂದಿದೆ. ಕೇಂದ್ರ ಸರ್ಕಾರವು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನುಯಾವುದೇ ಕಾರಣಕ್ಕೂ ಕೈಬಿಡಬಾರದು ಎಂದು ಒತ್ತಾಯಿಸಿದರು. ಅಲ್ಲದೇ ಬಿಜೆಪಿ ಸರ್ಕಾರದ ಜನವಿರೋಧಿ ನೀತಿಯ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ, ಬೂತ್ ಅಧ್ಯಕ್ಷರು, ಬಿ.ಎಲ್.ಏ-2, ವಾರ್ಡಿನ ಪ್ರಮುಖರಾದ ಮ್ಯಾಕ್ಸಿಮ್ ಡಿ'ಸೋಜಾ, ಕೃಷ್ಣಾನಂದ ಪೈ, ಅನಂತಕೃಷ್ಣ ಪ್ರಭು, ಮಲ್ಲೇಶ್, ಲಿಖಿತ್, ಗೀತಾ ರವಿ, ಶಹನವಾಝ್, ವಿನಯ ಕರ್ಕಡಾ, ಶುಶಾಂತ್ ಸಾಲಿನ್ಸ್, ಶೋಭಾ ಭಂಡಾರಿ, ಶಾಂತಾ, ರಮೇಶ್ ರಘುರಾಮ್ ಮೆಂಡನ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.





Ads on article

Advertise in articles 1

advertising articles 2

Advertise under the article