ಶೂಟೌಟ್ ನಿಂದ ಮಗನ ದಾರುಣ ಅಂತ್ಯ; ಚೂರಿ ಇರಿತಕ್ಕೊಳಗಾದ ಸ್ಥಿತಿಯಲ್ಲಿ ತಂದೆ ಆಸ್ಪತ್ರೆಗೆ ದಾಖಲು
Saturday, January 24, 2026
ಕಡಬ ತಾಲೂಕಿನ ರಾಮಕುಂಜ ಗ್ರಾಮದಲ್ಲಿ ಕೋವಿಯಿಂದ ಗುಂಡು ಹಾರಿಸಿಕೊಂಡು ಮೃತಪಟ್ಟ ಸ್ಥಿತಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ. ಅಲ್ಲದೇ ಆತನ ತಂದೆಯೂ ಚೂರಿಯಿಂದ ಇರಿತಕ್ಕೊಳಗಾಗಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೃತ ಬಾಲಕನನ್ನು ರಾಮಕುಂಜದ ವಸಂತ್ ಅಮೀನ್ ಪುತ್ರ ಮೋಕ್ಷ (17) ಎಂದು ಗುರುತಿಸಲಾಗಿದೆ.
ಕೇರಳ ಮೂಲದವರಾಗಿರುವ ವಸಂತ ಅಮೀನ್ ಅವರು ರಾಮಕುಂಜ ಪಾದೆ ಎಂಬಲ್ಲಿ ಜಾಗ ಖರೀದಿಸಿ ಮನೆ ಮಾಡಿ ತಂದೆ, ಮಗ ಜೊತೆಯಾಗಿ ವಾಸವಿದ್ದರು. ಮೋಕ್ಷ ಅವರು ಮಂಗಳೂರು ಖಾಸಗಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಯಾಗಿದ್ದ.
ಘಟನೆಗೆ ಸಂಬಂಧಿಸಿದಂತೆ ವಸಂತ ಅಮೀನ್ ವಿರುದ್ಧ ಅವರ ಪತ್ನಿ ಜಯಶ್ರೀ ದೂರು ದಾಖಲಿಸಿದ್ದು, ಮಗನನ್ನು ವಸಂತ ಶೂಟ್ ಮಾಡಿ ಕೊಲೆ ಮಾಡಿದ್ದಾರೆ ಎಂದು ದೂರು ದಾಖಲಿಸಿದ್ದಾರೆ.
ಪತ್ನಿ ಜಯಶ್ರೀ ಪತಿಯೊಂದಿಗೆ ಮನಸ್ತಾಪಗೊಂಡು ಮಂಗಳೂರಿನ ತನ್ನ ತಾಯಿ ಮನೆಯಲ್ಲಿದ್ದರು. ಕಳೆದ ಒಂದು ವರ್ಷದಿಂದ ಮನೆಯಲ್ಲಿ ತಂದೆ ಮತ್ತು ಮಗ ಮಾತ್ರ ಇದ್ದರು ಎಂದು ತಿಳಿದು ಬಂದಿದೆ. ಮನೆಯಲ್ಲಿ ಕೌಟುಂಬಿಕ ಕಲಹ ಈ ಕೃತ್ಯ ನಡೆದಿದೆ ಎಂದು ಹೇಳಲಾಗುತ್ತಿದೆ.
ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.