-->
ಬಾಡಿಗೆ ನೆಪದಲ್ಲಿ ಕರೆದೊಯ್ದು ಹಲ್ಲೆಗೈದು ವ್ಯಕ್ತಿಯ ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

ಬಾಡಿಗೆ ನೆಪದಲ್ಲಿ ಕರೆದೊಯ್ದು ಹಲ್ಲೆಗೈದು ವ್ಯಕ್ತಿಯ ಕೊಲೆ ಪ್ರಕರಣ; ಇಬ್ಬರು ಆರೋಪಿಗಳ ಬಂಧನ


ಮೂರು ತಿಂಗಳ ಹಿಂದೆ ಸುಳ್ಯದ ವ್ಯಕ್ತಿಯೊಬ್ಬರನ್ನು ಕಾರು ಬಾಡಿಗೆ ಪಡೆಯುವ ನೆಪದಲ್ಲಿ ಕರೆದುಕೊಯ್ದು ಮಾರಣಾಂತಿಕ ಹಲ್ಲೆ ನಡೆಸಿ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬOಧಿಸಿ ಇಬ್ಬರು ಆರೋಪಿಗಳನ್ನು ಸುಳ್ಯ ಪೊಲೀಸರು ಬಂಧಿಸಿದ್ದಾರೆ. 

ಸುಳ್ಯ ಕಸಬ ನಿವಾಸಿ ಮೊಹಮ್ಮದ್ ರಫೀಕ್ (41), ಸುಳ್ಯ ಸಂಪಾಜೆ ನಿವಾಸಿ ಮನೋಹರ್ ಕೆ. ಎಸ್ ಬಂಧಿತ ಆರೋಪಿಗಳು. ಸುಳ್ಯ ಕಸ್ಟಾ ಗ್ರಾಮದ ನಿವಾಸಿ ಸುಮಯ್ಯಾ ಎಂಬವರ ದೂರಿನಂತೆ ಕೊಲೆ ಪ್ರಕರಣ ದಾಖಲಾಗಿತ್ತು. ಮಹಿಳೆಯ ಗಂಡ ಅಬ್ದುಲ್ ಜಬ್ಬಾರ್ ಎಂಬವರನ್ನು ಅಕ್ಟೋಬರ್ 16ರಂದು ಮಧ್ಯಾಹ್ನ ವೇಳೆ, ಆರೋಪಿಗಳಾದ ಮೊಹಮ್ಮದ್ ರಫೀಕ್ ಮತ್ತು ಇತರರು, ಕಾರು ಬಾಡಿಗೆ ನೆಪದಲ್ಲಿ ದುಗ್ಗಲಡ್ಕ ಎಂಬಲ್ಲಿಗೆ ಕರೆದುಕೊಂಡು ಹೋಗಿ ಕಿರುಕುಳ ನೀಡಿ, ಅಲ್ಲಿಂದ ಸುಳ್ಯ ಕಲ್ಲುಗುಂಡಿಗೆ ಕರೆತಂದು ಮಾರಣಾಂತಿಕ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಮನೆಗೆ ಕಳುಹಿಸಿದ್ದರು. ಮರುದಿನ 17ರಂದು ಅಬ್ದುಲ್ ಜಬ್ಬಾರ್ ಮನೆಯಲ್ಲಿದ್ದಾಗ ಅನಾರೋಗ್ಯಕ್ಕೀಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾರೆ. ಅಬ್ದುಲ್ ಜಬ್ಬಾರ್ ಸಾವಿಗೆ ರಫೀಕ್ ಪಡು ಮತ್ತು ಇತರರು ಹಲ್ಲೆ ನಡೆಸಿದ್ದೇ ಕಾರಣ ಎಂಬುದಾಗಿ ಸುಮಯ್ಯಾ ಅವರು ಅ.18ರಂದು ನೀಡಿದ ದೂರಿನ ಮೇರೆಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ: 125/2025, ಕಲಂ: 105 ಜೊತೆಗೆ 3(5) BNS ರಂತೆ ಪ್ರಕರಣ ದಾಖಲಾಗಿರುತ್ತದೆ.

ಆರೋಪಿಗಳು ನಡೆಸಿದ ಹಲ್ಲೆಯ ಪರಿಣಾಮ ಅಬ್ದುಲ್ ಜಬ್ಬಾರ್ ಮೃತಪಟ್ಟಿರುವುದಾಗಿ ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದ್ದರಿಂದ ಸದ್ರಿ ಪ್ರಕರಣವನ್ನು ಕಲಂ: 103 ಜೊತೆಗೆ 3(5) BNS ರಂತೆ ಕೊಲೆ ಪ್ರಕರಣವಾಗಿ ಮಾರ್ಪಡಿಸಲಾಗಿದೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

Ads on article

Advertise in articles 1

advertising articles 2

Advertise under the article