ಪ್ರಸಿದ್ಧ ಲೇಖಕಿ, ಕಾದಂಬರಿಕಾರ್ತಿ ಆಶಾ ರಘು ಆತ್ಮಹತ್ಯೆ...!
Saturday, January 10, 2026
ಕನ್ನಡ ಪ್ರಸಿದ್ಧ ಲೇಖಕಿ, ಕಾದಂಬರಿಕಾರ್ತಿ, ಪ್ರಕಾಶಕಿ ಹಾಗೂ ಕಲಾವಿದೆ ಆಶಾ ರಘು(47) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ತಮ್ಮ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ.
ಇವರ ಪತಿ, ಖ್ಯಾತ ಆಹಾರ ತಜ್ಞ ಹಾಗೂ ಲೇಖಕ ಕೆಸಿ ರಘು ಎರಡು ವರ್ಷಗಳ ಹಿಂದೆ ನಿಧನರಾಗಿದ್ದರು. ಆಶಾ ಅವರಿಗೆ ಪುತ್ರಿ ಇದ್ದಾರೆ. ಪತಿ ನಿಧನ ನಂತರ ಮಾನಸಿಕವಾಗಿ ಬಹಳ ನೊಂದಿದ್ದರು. ನಿನ್ನೆ(ಜ.9) ರಾತ್ರಿ ಅವರು ಮನೆಯ ಕೊಠಡಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮನೆಯವರಿಗೆ ಗೊತ್ತಾಗಿ ಬಾಗಿಲು ಒಡೆದು ರಕ್ಷಿಸುವಷ್ಟರಲ್ಲಿ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು ಎಂದು ತಿಳಿದುಬಂದಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ.