ರಸ್ತೆ ದಾಟುತ್ತಿದ್ದ ಹೆಬ್ಬಾವು ಸೆರೆ; ಸುರಕ್ಷಿತ ಪ್ರದೇಶಕ್ಕೆ ರವಾನೆ (Video)
Thursday, January 01, 2026
ಉಡುಪಿಯ ಚಿಟ್ಪಾಡಿಯ ಹನುಮಾನ್ ಗ್ಯಾರೇಜ್ ಬಳಿ ರಸ್ತೆ ದಾಟುತ್ತಿದ್ದ ಹೆಬ್ಬಾವೊಂದನ್ನು ಸ್ಥಳೀಯರು ಹಿಡಿದು ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಡಿ. 31ರ ತಡರಾತ್ರಿ 12 ಗಂಟೆ ಸುಮಾರಿಗೆ ಉಡುಪಿಯ ಚಿಟ್ಪಾಡಿ ಸಮೀಪದ ಹನುಮಾನ್ ಗ್ಯಾರೇಜ್ ಬಳಿ ಬೃಹತ್ ಗಾತ್ರದ ಹೆಬ್ಬಾವು ರಸ್ತೆ ದಾಟುತ್ತಿತ್ತು. ಇದನ್ನು ಗಮನಿಸಿದ ವಾಹನ ಸವಾರರು ಸ್ಥಳೀಯ ನಿವಾಸಿಗಳಿಗೆ ಮಾಹಿತಿ ನೀಡಿದ್ದಾರೆ. ಇತರರ ಸಹಾಯದಿಂದ ಸುರಕ್ಷಿತವಾಗಿ ಹೆಬ್ಬಾವನ್ನು ಹಿಡಿದಿದ್ದಾರೆ. ಬಳಿಕ ಗೋಣಿ ಚೀಲದಲ್ಲಿ ತುಂಬಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.