ವಾರಾಹಿ ಯೋಜನೆ ಸಮಸ್ಯೆ ಶೀಘ್ರವೇ ಇತ್ಯರ್ಥ- ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Video)
Monday, January 26, 2026
ವಾರಾಹಿ ನೀರಾವರಿ ಯೋಜನೆಯಿಂದ ರೈತರಿಗೆ ಅನುಕೂಲ ಆಗಲಿದ್ದು, ಯೋಜನೆಯ ಬಗ್ಗೆ ತಾಂತ್ರಿಕ ತಂಡದ ಜೊತೆ ಸಭೆ ನಡೆಸಿ, ಆದಷ್ಟು ಬೇಗ ಪರಿಹಾರ ಕಲ್ಪಿಸುವುದಾಗಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಉಡುಪಿಯಲ್ಲಿ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು. ವಾರಾಹಿ ಯೋಜನೆ ಜಿಲ್ಲೆಯ ಬಹುದಿನದ ಬೇಡಿಕೆಯಾಗಿದ್ದು, ಯೋಜನೆಯ ಬಗ್ಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಮಾಹಿತಿ ಇದೆ ಎಂದರು.
ವಾರಾಹಿ ನೀರಾವರಿ ಯೋಜನೆ ಬಗ್ಗೆ ಕಾಂಗ್ರೆಸ್ ನಾಯಕರ ಕಚ್ಚಾಟ ವಿಚಾರಕ್ಕೆ ಸಂಬOಧಿಸಿದOತೆ ಪ್ರತಿಕ್ರಿಯಿಸಿದ ಸಚಿವರು, ಇದು ರೈತರ ಅನುಕೂಲಕ್ಕಾಗಿ ಮಾಡಿದ ಯೋಜನೆ, ತಾಂತ್ರಿಕ ತಂಡ ಬಂದು ಹೋಗಿದೆ. ಹಿರಿಯ ಕಾಂಗ್ರೆಸ್ ನಾಯಕ ಪ್ರತಾಪ್ ಚಂದ್ರ ಶೆಟ್ಟಿ ಅವರ ಬಗ್ಗೆ ನಾನು ಮಾತನಾಡಲ್ಲ. ತಾಂತ್ರಿಕ ತಂಡ ಪರಿಶೀಲನೆ ನಡೆಸಿದೆ. ಜಿಲ್ಲಾಡಳಿತಕ್ಕೆ ಸಂಪೂರ್ಣ ಮಾಹಿತಿ ಇದ್ದು, ಆದಷ್ಟು ಬೇಗ ಪರಿಹಾರ ಕಂಡುಕೊಳ್ಳುತ್ತೇವೆ. ಈ ಯೋಜನೆ ನೆನೆಗುದಿಗೆ ಬಿದ್ದಿರುವುದು ದುರ್ದೈವ ಎಂದು ಹೇಳಿದರು.