ಅಂಬಾಗಿಲು ಜಂಕ್ಷನ್ ಬಳಿ ಪರಶುರಾಮ ದ್ವಾರದ ಗುದ್ದಲಿ ಪೂಜೆ (Video)
Friday, January 16, 2026
ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದರು ಅಂಬಾಗಿಲು ಜಂಕ್ಷನ್ ಬಳಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಪರಶುರಾಮ ದ್ವಾರದ ಗುದ್ದಲಿ ಪೂಜೆ ನೆರವೇರಿಸಿದರು.
ತಮ್ಮ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಪರಶುರಾಮ ದ್ವಾರ ನಿರ್ಮಿಸಲು ಶ್ರೀಗಳು ಸಂಕಲ್ಪಿಸಿದ್ದು, ಅನೇಕ ಗಣ್ಯರ ಸಮ್ಮುಖದಲ್ಲಿ ಗುದ್ದಲಿ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಪರ್ಯಾಯ ಸ್ವಾಗತ ಸಮಿತಿ ಅಧ್ಯಕ್ಷ ಶಾಸಕ ಯಶ್ ಪಾಲ್ ಸುವರ್ಣ, ಪ್ರಧಾನ ಕಾರ್ಯದರ್ಶಿ ಮಟ್ಟಾರ್ ರತ್ನಾಕರ್ ಹೆಗ್ಡೆ, ಮಠದ ದಿವಾನರಾದ ಡಾ. ಉದಯ ಕುಮಾರ ಸರಳತ್ತಾಯ, ಸಂಚಾಲಕ ಬೈಕಾಡಿ ಸುಪ್ರಸಾದ್ ಶೆಟ್ಟಿ, ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ, ಶ್ರೀಶ ಕಡೆಕಾರ್, ಬಾಲಾಜಿ ರಾಘವೇಂದ್ರ ಆಚಾರ್ಯ, ವಿಷ್ಣುಮೂರ್ತಿ ಪಾಡಿಗಾರ್, ಬಾಲಕೃಷ್ಣ ಶೆಟ್ಟಿ ನಿಟ್ಟೂರು, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್ ಮಧುಕರ್ ಮುದ್ರಾಡಿ ಮೊದಲಾದವರು ಉಪಸ್ಥಿತರಿದ್ದರು.
