ಮಂಗಳೂರಿನ ಅಲ್ಬುಕರ್ಕ್ ಸನ್ಸ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ (Video)
Tuesday, January 20, 2026
ಮಂಗಳೂರಿನ ಹೊಯಿಗೆ ಬಜಾರ್ ಪ್ರದೇಶದಲ್ಲಿರುವ ಅಲ್ಬುಕರ್ಕ್ & ಸನ್ಸ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದೆ.
ಕಾರ್ಖಾನೆಯಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ ಇಡೀ ಪ್ರದೇಶವನ್ನು ವ್ಯಾಪಿಸಿದೆ. ಘಟನೆಯಿಂದ ಭಾರೀ ಪ್ರಮಾಣದ ನಷ್ಟ ಉಂಟಾಗಿದೆ. ಘಟನಾಸ್ಥಳಕ್ಕೆ ತುರ್ತು ಅಗ್ನಿಶಾಮಕದಳ ಧಾವಿಸಿದೆ. ಘಟನೆಯಲ್ಲಿ ಯಾವುದೇ ಸಾವು ನೋವಾಗಿರುವ ಬಗ್ಗೆ ಮಾಹಿತಿ ದಾಖಲಾಗಿಲ್ಲ. ಕಾರ್ಖಾನೆಯಲ್ಲಿ ಯಾವ ಕಾರಣಕ್ಕೆ ಬೆಂಕಿ ಅವಘಡ ಸಂಭವಿಸಿದೆ ಎನ್ನುವುದರ ಬಗ್ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ಘಟನೆಗೆ ಕಾರಣ ಏನು ಎನ್ನುವುದರ ಬಗ್ಗೆ ಪರಿಶೀಲಿಸಿದ್ದಾರೆ.