ಕುರ್ಚಿಯಲ್ಲಿ ಕುಳಿತಿದ್ದಾಗಲೇ ಅಸ್ವಸ್ಥಗೊಂಡು ಹೋಂ ನರ್ಸ್ ಸಾವು (Video)
Saturday, January 03, 2026
ಕುರ್ಚಿಯ ಮೇಲೆ ಕೂತಲ್ಲಿಯೇ ಹೋಮ್ ನರ್ಸ್ವೊಬ್ಬರು ಮೃತಪಟ್ಟ ಘಟನೆ ಉಡುಪಿಯ ಕಿನ್ನಿಮೂಲ್ಕಿ ಗರಡಿ ರಸ್ತೆಯಲ್ಲಿ ಸಂಭವಿಸಿದೆ.
ಮೃತರನ್ನು ಹೊಮ್ ನರ್ಸ್ ಪ್ರದೀಪ್ ಅಜ್ಜರಕಾಡು(55) ಎಂದು ಗುರುತಿಸಲಾಗಿದೆ. ಇವರು ತನ್ನ ಬಾಡಿಗೆ ಮನೆಯಲ್ಲಿ ಕುರ್ಚಿಯಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿದ್ದು ಇದೇ ವೇಳೆ ತೀವ್ರ ಅಸ್ವಸ್ಥಗೊಂಡಿದ್ದಾರೆ.
ತಕ್ಷಣ ಸ್ಥಳೀಯರು ನೀಡಿದ ಮಾಹಿತಿಯಂತೆ ಆಗಮಿಸಿದ ಸಮಾಜಸೇವಕ ನಿತ್ಯಾನಂದ ಒಳಕಾಡು ಪ್ರದೀಪ್ ಅವರನ್ನು ಆಂಬುಲೆನ್ಸ್ ಮೂಲಕ ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದಾರೆ. ಅಲ್ಲಿ ಪರಿಕ್ಷೀಸಿದ ವೈದ್ಯರು ಪ್ರದೀಪ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಮೃತ ವ್ಯಕ್ತಿ ಸಮಾಜಮುಖಿ ಕೆಲಸ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದು, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೇತ್ರತ್ವದಲ್ಲಿ ನಡೆಯುವ ಅನಾಥ ಶವಗಳ ಅಂತ್ಯಸOಸ್ಕಾರ ನೇರವೇರಿಸುವ ಕಾರ್ಯದಲ್ಲಿ ಭಾಗಿಯಾಗುತ್ತಿದ್ದರು.