-->
 ಸಹಕಾರಿ ಧುರೀಣ ಕಾಪು ದಿವಾಕರ್ ಶೆಟ್ಟಿ ಮನೆಯಲ್ಲಿ ಕಳ್ಳತನ (Video)

ಸಹಕಾರಿ ಧುರೀಣ ಕಾಪು ದಿವಾಕರ್ ಶೆಟ್ಟಿ ಮನೆಯಲ್ಲಿ ಕಳ್ಳತನ (Video)


ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. 


ಕಾಪು ದಿವಾಕರ್ ಶೆಟ್ಟಿ ಅವರ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕಾಗಿ ಮುಂಬೈಗೆ ತೆರಳಿದ್ದರು. ಪುರಸಭಾ ಸದಸ್ಯ ಸುರೇಶ್ ಶೇರಿಗಾರ್ ಎಂಬವರನ್ನು ಮನೆಯ ಉಸ್ತುವಾರಿ ನೋಡಿಕೊಳ್ಳಲು ನೇಮಿಸಿದ್ದರು. ಗುರುವಾರ ರಾತ್ರಿ ಸುರೇಶ ಅವರು ಮನೆಯ ಮೇಲ್ಮಹಡಿಯಲ್ಲಿ ಮಲಗಿದ್ದ ವೇಳೆ ಮುಸುಕುಧಾರಿಗಳು ಮನೆಯ ಬಾಗಿಲು ಮುರಿದು ಒಳನುಗ್ಗಿ ಕಳ್ಳತನ ಮಾಡಿದ್ದಾರೆ. ಮನೆಯಲ್ಲಿದ್ದ ನಗ ನಗದು ದೋಚಿದ್ದಾರೆ. ಅಲ್ಲದೇ ಮನೆಯಲ್ಲಿ ಅಳವಡಿಸಿದ್ದ ಸಿಸಿಟಿವಿಯನ್ನೂ ಪುಡಿಗೈದಿದ್ದಾರೆ. ಕಾಪು ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ. ಬೆರಳಚ್ಚು ತಜ್ಞರು ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದಾರೆ.





 


Ads on article

Advertise in articles 1

advertising articles 2

Advertise under the article