ನೀಲಾವರದಲ್ಲಿ ಬೆಂಕಿ ಆಕಸ್ಮಿಕ; ಲಕ್ಷಾಂತರ ರೂ. ನಷ್ಟ(Video)
Thursday, January 08, 2026
ಬ್ರಹ್ಮಾವರ ತಾಲ್ಲೂಕಿನ ನೀಲಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀಲಾವರ ಮಟಪಾಡಿ ರಸ್ತೆಯ ಜೆನಿತ್ ಡೈ ಮೇಕರ್ಸ್ ಹಿಂಭಾಗದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ.
ಏಕಾಏಕಿ ಬೆಂಕಿ ಕಾಣಿಸಿಕೊಂಡು ಎಕ್ರೆಗಟ್ಟಲೆ ತೋಟಕ್ಕೆ ವ್ಯಾಪಿಸಿದೆ. ಬೆಂಕಿಯ ತೀವ್ರತೆಗೆ ಹತ್ತಾರು ಎಕ್ರೆ ಮಾವು, ಹಲಸು, ಪರಂಗಿ, ತೆಂಗು, ಅಡಿಕೆ ತೋಟ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ನೀಲಾವರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಮಹೇಂದ್ರ ಕುಮಾರ್ ಮತ್ತು ಸ್ಥಳೀಯರು ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದಾರೆ. ಅಗ್ನಿಶಾಮಕಳ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.