-->
 ಭಗವದ್ವಜ ವಿವಾದ; ಧಾರ್ಮಿಕ ಭಾವನೆ ಕೆರಳಿಸಬೇಡಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Video)

ಭಗವದ್ವಜ ವಿವಾದ; ಧಾರ್ಮಿಕ ಭಾವನೆ ಕೆರಳಿಸಬೇಡಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Video)


ಉಡುಪಿ ಪರ್ಯಾಯದ ವೇಳೆ ಜಿಲ್ಲಾಧಿಕಾರಿ ಸ್ವರೂಪ ಅವರು ಭಗವದ್ವಜ ಪ್ರದರ್ಶಿಸಿರುವ ವಿಚಾರದಲ್ಲಿ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಪ್ರಯತ್ನ ಮಾಡಬೇಡಿ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. 

ಉಡುಪಿಯಲ್ಲಿ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು. ಉಡುಪಿ ಜಿಲ್ಲೆ ಸಂಸ್ಕೃತಿ ಹಾಗೂ ಧಾರ್ಮಿಕ ನಂಬಿಕೆಗಳಿಗೆ ಹೆಸರುವಾಸಿಯಾಗಿದೆ. ಉಡುಪಿ ಪರ್ಯಾಯ ಒಂದು ಧಾರ್ಮಿಕ ಕಾರ್ಯಕ್ರಮ. ಈ ಕಾರ್ಯಕ್ರಮದಲ್ಲಿ ಜನರ ಧಾರ್ಮಿಕ ನಂಬಿಕೆಯನ್ನು ಕೆರಳಿಸುವ ಪ್ರಯತ್ನ ಮಾಡಬಾರದು. ಈ ವಿಚಾರ ನನಗೆ ಮೊದಲೇ ಗೊತ್ತಿದೆ. ಇದನ್ನು ಇಲ್ಲಿಗೆ ಬಿಟ್ಟು ಬಿಡಿ ಎಂದು ಮನವಿ ಮಾಡಿದರು.



 

Ads on article

Advertise in articles 1

advertising articles 2

Advertise under the article