-->
 ಬ್ರಹ್ಮಾವರ ಜಿ.ಎಂ ವಿದ್ಯಾನಿಕೇತನದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

ಬ್ರಹ್ಮಾವರ ಜಿ.ಎಂ ವಿದ್ಯಾನಿಕೇತನದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ


ದೀಪದಿಂದ ದೀಪ ಹಚ್ಚಿದಾಗ ಬೆಳಕು ನಿರಂತರವಾಗಿ ಪ್ರಜ್ವಲಿಸಿ ಕತ್ತಲಿಗೆ ಅವಕಾಶ ನೀಡುವುದಿಲ್ಲವೋ, ಅದೇ ರೀತಿಯಲ್ಲಿ ಜಿ.ಎಂ. ಸಂಸ್ಥೆ ವಿದ್ಯಾರ್ಥಿಗಳಿಗೆ ಜ್ಞಾನ, ಸಂಸ್ಕಾರ ಹಾಗೂ ಜೀವನ ಮೌಲ್ಯಗಳನ್ನು ನೀಡಿದೆ. ಈ ಮೌಲ್ಯಯುತ ಜ್ಞಾನವನ್ನು ಬಳಸಿಕೊಂಡು ಸ್ವಸ್ಥ ರಾಷ್ಟ್ರ ನಿರ್ಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಶಿರೂರು ಮಠದ ದಿವಾನರು, ಖ್ಯಾತ ಸಂಸ್ಕೃತ ಪಂಡಿತ ಡಾ. ಉದಯಕುಮಾರ್ ಸರಳತ್ತಾಯ ಹೇಳಿದರು.


ಅವರು ಬ್ರಹ್ಮಾವರ ಜಿ.ಎಂ. ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸುವ ಜೊತೆಗೆ ಪೋಷಕರ ಮುಖದಲ್ಲಿ ನಗು ತರಿಸುವಂತಹ ಸಾಧನೆಗಳನ್ನು ಮಾಡಬೇಕು. ಭವಿಷ್ಯದಲ್ಲಿ ನಿಮ್ಮ ಸಾಧನೆಗಳನ್ನು ನಮ್ಮೊಂದಿಗೆ ಹಂಚಿಕೊOಡಾಗ ಸಂತೃಪ್ತಿಯ ಭಾವನೆ ಮೂಡುತ್ತದೆ ಎಂದು ಶುಭ ಹಾರೈಸಿದರು.

ಶಾಲಾ ಪ್ರಾಂಶುಪಾಲ ಜಾರ್ಜ್ ಕುರಿಯನ್ ಅವರು ವಿದ್ಯಾರ್ಥಿಗಳಿಗೆ ಅಂತಿಮ ಪರೀಕ್ಷೆ ಹಾಗೂ ಮುಂದಿನ ಜೀವನಕ್ಕೆ ಶುಭಹಾರೈಸಿ, ಶಿಸ್ತಿನ ಜೀವನವನ್ನು ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು. ಸಂಸ್ಥೆಯ ಹಳೆ ವಿದ್ಯಾರ್ಥಿನಿ ಶ್ರೀ ರಕ್ಷಾ ಅಡಿಗ ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ಗುರಿ ಸಾಧನೆಗೆ ಪ್ರತಿಯೊಂದು ಹಂತದಲ್ಲೂ ಬರುವ ಸವಾಲುಗಳನ್ನು ಆತ್ಮಸ್ಥೈರ್ಯದಿಂದ ಎದುರಿಸಿ ಮುನ್ನುಗ್ಗಬೇಕು ಎಂದರು.

ಪೋಷಕರಾದ ಸಂಗೀತ ಪ್ರದೀಪ್ ಕೊತ್ವಾಲ್ ಮಾತನಾಡಿ, ಜಿ.ಎಂ. ಸಂಸ್ಥೆ ಮಕ್ಕಳ ಶೈಕ್ಷಣಿಕ ಹಾಗೂ ನೈತಿಕ ಬೆಳವಣಿಗೆಗೆ ಉತ್ತಮ ವೇದಿಕೆಯನ್ನು ಒದಗಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಶಾಲೆಯ ವಾರ್ಷಿಕ ಸಂಚಿಕೆ ‘ಪರಿಕ್ರಮ’ ಹಾಗೂ ‘ಜಿ.ಎಂ. ಟೈಮ್ಸ್’ ಅನ್ನು ಶಾಲಾ ಅಧ್ಯಕ್ಷರು ಹಾಗೂ ಜಿ.ಎಂ. ಗ್ಲೋಬಲ್ ಸ್ಕೂಲ್‌ನ ಆಡಳಿತ ನಿರ್ದೇಶಕರಾದ ಪ್ರಣವ್ ಶೆಟ್ಟಿ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ, ಪ್ರಣವ್ ಶೆಟ್ಟಿ, ಶಿಕ್ಷಕ ವೃಂದ, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. 

 

Ads on article

Advertise in articles 1

advertising articles 2

Advertise under the article