ಗಾಂಜಾ ಪ್ರಕರಣ; 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
Wednesday, February 04, 2026
ಗಾಂಜಾ ಪ್ರಕರಣವೊಂದರಲ್ಲಿ ಶಾಮೀಲಾಗಿ ಕಳೆದ 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಮುಕಚೇರಿ ನಿವಾಸಿ ಮುಹಮ್ಮದ್ ಸಂಶೀರ್ ಎಂಬಾತ ಬಂಧಿತ ಆರೋಪಿ. ತಲೆಮರೆಸಿಕೊಂಡಿದ್ದ ಆರೋಪಿಗೆ ನ್ಯಾಯಾಲಯವು ಎಲ್ ಪಿಸಿ ವಾರಂಟ್ ಹೊರಡಿಸಿತ್ತು. 14 ವರ್ಷಗಳ ಬಳಿಕ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.