-->
 ಫೆ.18: ಉಡುಪಿಗೆ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ ರ‍್ಯಾಲಿ ಆಗಮನ

ಫೆ.18: ಉಡುಪಿಗೆ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ ರ‍್ಯಾಲಿ ಆಗಮನ


ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿ.ಐ.ಎಸ್.ಎಫ್) ವತಿಯಿಂದ ಆಯೋಜಿಸಿರುವ ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ 2026 ರ‍್ಯಾಲಿಯು ಫೆ. 18ರಂದು ಉಡುಪಿ ಜಿಲ್ಲೆ ಮೂಲಕ ಸಂಚರಿಸಲಿದ್ದು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಗತ್ಯ ಪೂರ್ವಸಿದ್ಧತೆ ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್ ಸೂಚನೆ ನೀಡಿದರು.


ಅವರು ಮಣಿಪಾಲದ ರಜತಾದ್ರಿಯ ತಮ್ಮ ಕಚೇರಿಯಲ್ಲಿ ಸೈಕ್ಲೋಥಾನ್ ಸಂಬAಧಿಸಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಂದೇ ಮಾತರಂ ಗೀತೆಗೆ 150 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸಿ.ಐ.ಎಸ್.ಎಫ್ ವತಿಯಿಂದ ಈ ಕೋಸ್ಟಲ್ ಸೈಕ್ಲೋಥಾನ್ ಆಯೋಜಿಸಲಾಗಿದ್ದು, ದೇಶದ ಪಶ್ಚಿಮ ಕರಾವಳಿಯ ಸಮುದಾಯಗಳು, ಸಂಸ್ಕೃತಿ ಹಾಗೂ ರಾಷ್ಟ್ರೀಯ ಸಂಕಲ್ಪವನ್ನು ಒಟ್ಟುಗೂಡಿಸುವ ಉದ್ದೇಶ ಹೊಂದಿದೆ. ಈ ರ‍್ಯಾಲಿಗೆ ಈಗಾಗಲೇ ಜನವರಿಯಲ್ಲಿ ಗುಜರಾತ್ ಹಾಗೂ ಪಶ್ಚಿಮ ಬಂಗಾಳದಲ್ಲಿ ಏಕಕಾಲಕ್ಕೆ ಚಾಲನೆ ನೀಡಲಾಗಿದ್ದು, ಸುಮಾರು 6,500 ಕಿ.ಮೀ. ದೂರ ಸಂಚರಿಸಿ ಫೆಬ್ರವರಿ 21ರಂದು ಕೇರಳದ ಕೊಚ್ಚಿಯಲ್ಲಿ ಸಮಾಪ್ತಿಗೊಳ್ಳಲಿದೆ ಎಂದು ತಿಳಿಸಿದರು. 

ರ‍್ಯಾಲಿಯು ಸುಗಮವಾಗಿ ಸಾಗುವಂತೆ ಅಗತ್ಯ ಭದ್ರತೆ, ಸಂಚಾರ ವ್ಯವಸ್ಥೆ ಹಾಗೂ ವೈದ್ಯಕೀಯ ನೆರವು ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದ್ದು, ಆಂಬುಲೆನ್ಸ್ ಹಾಗೂ ವೈದ್ಯಕೀಯ ಸಿಬ್ಬಂದಿಯನ್ನು ನಿಯೋಜಿಸಲಾಗುವುದು ಎಂದು ಹೇಳಿದರು. 

ಸಭೆಯಲ್ಲಿ ಎನ್.ಎಂ.ಪಿ.ಎ ಮಂಗಳೂರು ಸೆಂಟ್ರಲ್ ಇಂಡಸ್ಟ್ರಿಯಲ್ ಸಿಕ್ಯುರಿಟಿ ಫೋರ್ಸ್ನ ರಾಜೇಂದ್ರ ಪ್ರಸಾದ್ ಪಾಠಕ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ಜಿಲ್ಲಾ ಏಡ್ಸ್ ನಿಯಂತ್ರಣ ಅಧಿಕಾರಿ ಡಾ. ಚಿದಾನಂದ ಸಂಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Ads on article

Advertise in articles 1

advertising articles 2

Advertise under the article