-->
 2026ರ ಎಸ್‌ಎಸ್‌ಎಲ್‌ಸಿ, ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ

2026ರ ಎಸ್‌ಎಸ್‌ಎಲ್‌ಸಿ, ಪಿಯುಸಿ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಪ್ರಕಟ


2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ  ವಾರ್ಷಿಕ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬಿಡುಗಡೆ ಮಾಡಿದೆ.

ಈ ಬಗ್ಗೆ ಶಿಕ್ಷಣ ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ 2026ರ ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿ ಮತ್ತು ಇತರ ವಿವರಗಳನ್ನು ಪ್ರಕಟಿಸಿದ್ದಾರೆ. ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ 9,02,889 ವಿದ್ಯಾರ್ಥಿಗಳು ನೋಂದಣಿ ಮಾಡಿಸಿದ್ದಾರೆ ಎಂದು ತಿಳಿಸಿದ್ದಾರೆ.ಈ ಬಾರಿ ರಾಜ್ಯಾದ್ಯಂತ ಬೋರ್ಡ್ ಪರೀಕ್ಷೆಗಳನ್ನು ಅತ್ಯಂತ ಸುಗಮ ಹಾಗೂ ಪಾರದರ್ಶಕವಾಗಿ ನಡೆಸಲು ಶಿಕ್ಷಣ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷಾ ಸಿದ್ಧತೆಗಳ ಕುರಿತು ಪೊಲೀಸ್ ಇಲಾಖೆ, ಗುಪ್ತಚರ ಇಲಾಖೆ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಲಾಗಿದೆ. ಅಲ್ಲದೆ, ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಬಿಇಒ ಮತ್ತು ಡಿಡಿಪಿಐ ಅವರೊಂದಿಗೂ ಸುದೀರ್ಘ ಚರ್ಚೆ ನಡೆಸಲಾಗಿದ್ದು, ಕಳೆದ ಬಾರಿಗಿಂತ ಹೆಚ್ಚಿನ ಹಾಗೂ ಅಚ್ಚುಕಟ್ಟಾದ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಸಚಿವರು ಭರವಸೆ ನೀಡಿದ್ದಾರೆ. 

2026ರ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇವರಿಗಾಗಿ ರಾಜ್ಯಾದ್ಯಂತ 1,217 ಪರೀಕ್ಷಾ ಕೇಂದ್ರಗಳನ್ನು ಸಜ್ಜುಗೊಳಿಸಲಾಗಿದೆ. ಅದೇ ರೀತಿ, ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಬರೆಯಲು 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊOಡಿದ್ದು, ಇವರಿಗಾಗಿ 2,871 ಪರೀಕ್ಷಾ ಕೇಂದ್ರಗಳನ್ನು ನಿಗದಿಪಡಿಸಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ (ಫೆಬ್ರವರಿ 28 ರಿಂದ ಮಾರ್ಚ್ 17): 

ಫೆಬ್ರವರಿ 28: ಕನ್ನಡ, ಅರೇಬಿಕ್ ಮಾರ್ಚ್ 2: ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ ಮಾರ್ಚ್ 3: ಇಂಗ್ಲಿಷ್ ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಮಾರ್ಚ್ 5: ಇತಿಹಾಸ ಮಾರ್ಚ್ 6: ಭೌತಶಾಸ್ತ್ರ ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭ ಶಾಸ್ತ್ರ ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ ಮಾರ್ಚ್ 10: ಅರ್ಥಶಾಸ್ತ್ರ ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ ಮಾರ್ಚ್ 12: ಹಿಂದಿ ಮಾರ್ಚ್ 13: ರಾಜ್ಯಶಾಸ್ತ್ರ ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ ಮಾರ್ಚ್ 17: ಹಿಂದುಸ್ತಾನಿ ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ 

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1 ವೇಳಾಪಟ್ಟಿ (ಮಾರ್ಚ್ 18 ರಿಂದ ಏಪ್ರಿಲ್ 2): ಮಾರ್ಚ್ 18: ಪ್ರಥಮ ಭಾಷೆ ಮಾರ್ಚ್ 23: ವಿಜ್ಞಾನ ಮಾರ್ಚ್ 25: ದ್ವಿತೀಯ ಭಾಷೆ ಮಾರ್ಚ್ 28: ಗಣಿತ ಮಾರ್ಚ್ 30: ತೃತೀಯ ಭಾಷೆ ಏಪ್ರಿಲ್ 2: ಸಮಾಜ ವಿಜ್ಞಾನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ವೇಳಾಪಟ್ಟಿ (ಮೇ 18 ರಿಂದ ಮೇ 23): ಮೇ 18: ಪ್ರಥಮ ಭಾಷೆ ಮೇ 19: ವಿಜ್ಞಾನ ಮೇ 20: ದ್ವಿತೀಯ ಭಾಷೆ ಮೇ 21: ಗಣಿತ ಮೇ 22: ತೃತೀಯ ಭಾಷೆ ಮೇ 23: ಸಮಾಜ ವಿಜ್ಞಾನ. 



Ads on article

Advertise in articles 1

advertising articles 2

Advertise under the article