-->
 ಫೆ.22: ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ 300ನೇ ರಕ್ತದಾನ ಶಿಬಿರ

ಫೆ.22: ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ 300ನೇ ರಕ್ತದಾನ ಶಿಬಿರ


ಉಡುಪಿಯ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ವತಿಯಿಂದ 300ನೇ ರಕ್ತದಾನ ಶಿಬಿರ, ರಕ್ತದಾನಿಗಳಿಗೆ ಸ್ಮರಣಿಕೆ ಹಾಗೂ ಪ್ರಶಂಸಾ ಪತ್ರ ವಿತರಣೆಯು ಫೆ. 22ರಂದು ಮಣಿಪಾಲದ ಕೆಎಂಸಿ ಡಾ. ಟಿ.ಎಂ.ಎ ಪೈ ಹಾಲ್‌ನಲ್ಲಿ ನಡೆಯಲಿದೆ ಎಂದು ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಸತೀಶ್ ಸಾಲ್ಯಾನ್ ತಿಳಿಸಿದ್ದಾರೆ. 

ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಕೊರೊನಾ ಸಂದರ್ಬದಲ್ಲಿ ಆರಂಭಿಸಿರುವ ಈ ಸಂಸ್ಥೆ ಈಗ ರಕ್ತದಾನದಲ್ಲಿ ಉಡುಪಿ ಜಿಲ್ಲೆಯಲ್ಲಿ ಎರಡನೇ ಸ್ಥಾನದಲ್ಲಿದೆ. ಉಡುಪಿ, ಮಂಗಳೂರು, ಚಿಕ್ಕಮಗಳೂರಿನಲ್ಲಿ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಾ ಬಂದಿದ್ದು, 300ನೇ ಬಾರಿಯ ರಕ್ತದಾನ ಶಿಬಿರವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ ಅವರು ಉದ್ಘಾಟಿಸಲಿದ್ದಾರೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್‌ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ಸುನಿಲ್ ಕುಮಾರ್, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮೊದಲಾದವರು ಭಾಗವಹಿಸಲಿದ್ದಾರೆ. ಈ ಬಾರಿ 200 ಯುನಿಟ್ ರಕ್ತ ಸಂಗ್ರಹಿಸುವ ಗುರಿಯನ್ನು ಹೊಂದಿದ್ದೇವೆ ಎಂದರು. ಸುದ್ದಿಗೋಷ್ಟಿಯಲ್ಲಿ ದಿನೇಶ್ ಹೆಗ್ಡೆ ಆತ್ರಾಡಿ, ಹರಿಪ್ರಸಾದ್, ಶರತ್ ಕಾಂಚನ್ ಮೊದಲಾದವರು ಉಪಸ್ಥಿತರಿದ್ದರು. 


Ads on article

Advertise in articles 1

advertising articles 2

Advertise under the article