-->
 ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮ; ಫೆ.28ರಂದು ಸಾಂಸ್ಕೃತಿಕ ಸ್ಪರ್ಧೆ, ಮಾ.1ರಂದು ಬಿಲ್ಲವ ಸಮಾವೇಶ

ಯುವವಾಹಿನಿ ಉಡುಪಿ ಘಟಕದ ರಜತ ಸಂಭ್ರಮ; ಫೆ.28ರಂದು ಸಾಂಸ್ಕೃತಿಕ ಸ್ಪರ್ಧೆ, ಮಾ.1ರಂದು ಬಿಲ್ಲವ ಸಮಾವೇಶ


ಯುವವಾಹಿನಿ ಉಡುಪಿ ಘಟಕದ 25ನೇ ವರ್ಷದ ರಜತ ಮಹೋತ್ಸವದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಫೆಬ್ರವರಿ 28ರಂದು ಉಡುಪಿ ಜಿಲ್ಲೆಯ ಬಿಲ್ಲವ ಸಂಘಗಳಿಗೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮ ಯುವ ಸಂಗಮವು ಬನ್ನಂಜೆ ನಾರಾಯಣ ಗುರು ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಯುವವಾಹಿನಿ ಘಟಕದ ಅಧ್ಯಕ್ಷ ದಯಾನಂದ ಕರ್ಕೇರ ತಿಳಿಸಿದ್ದಾರೆ. 

ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ಫೆ. 28ರಂದು ಜನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದಲಿದ್ದಾರೆ. ಈ ಸ್ಪರ್ಧಾ ಕಾರ್ಯಕ್ರಮದಲ್ಲಿ 10 ತಂಡಗಳು ಭಾಗವಹಿಸಿ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೀಡಲಿದೆ. ಮಾ. 1ರಂದು ಯುವ ಸದ್ಭಾವನಾ ಯುವ ಬಿಲ್ಲವ ಸಮಾವೇಶ ನಡೆಯಲಿದ್ದು, ನಗರಾಭಿವೃದ್ಧಿ ಕಾರ್ಯದರ್ಶಿ ಹೆಚ್.ಕೆ ಕೃಷ್ಣಮೂರ್ತಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉದ್ಯಮ ಕ್ಷೇತ್ರದ ಸಾಧಕ ರಾಮಚಂದ್ರ ಮಾಬಿಯಾನ್, ಪ್ರಕಾಶ್ ಕರ್ಕೇರ, ಪ್ರಭಾಕರ ಪೂಜಾ, ಶೈಕ್ಷಣಿಕ ಕ್ಷೇತ್ರದ ಸಾಧಕರಾದ ಡಾ. ಸುನಿತಾ ಇವರಿಗೆ ರಜತ  ರತ್ನ ಗೌರವಾರ್ಪಣೆ ನಡೆಯಲಿದೆ ಎಂದರು. 

ಸುದ್ದಿಗೋಷ್ಟಿಯಲ್ಲಿ ರಜತ ಸಂಭ್ರಮ ಸಂಚಾಲಕ ರಘುನಾಥ್ ಮಾಬಿಯಾನ್, ಸಂತೋಷ್ ಕುಮಾರ್, ಪ್ರವೀಣ್ ಕುಮಾರ್, ನಾರಾಯಣ ಬಿ.ಎಸ್ ಮೊದಲಾದವರು ಉಪಸ್ಥಿತರಿದ್ದರು. 

Ads on article

Advertise in articles 1

advertising articles 2

Advertise under the article