ಹೈನುಗಾರರಿಗೆ ಮೇ ಅಂತ್ಯದವರೆಗೆ 4 ಕೋಟಿ ರೂ. ವಿಶೇಷ ಆರ್ಥಿಕ ನೆರವು- ರವಿರಾಜ್ ಹೆಗ್ಡೆ
Wednesday, February 25, 2026
ಹೈನುಗಾರರಿಗೆ ಉತ್ತೇಜನ ನೀಡುವ ಉದ್ದೇಶದಿಂದ ಪ್ರತೀ ಲೀಟರ್ ಹಾಲಿಗೆ 1 ರೂಪಾಯಿಯಂತೆ ಮೇ ತಿಂಗಳ ಅಂತ್ಯದವರೆಗೆ ಸುಮಾರು 4 ಕೋಟಿ ರೂಪಾಯಿ ಮೊತ್ತದ ವಿಶೇಷ ಪ್ರೋತ್ಸಾಹ ಧನ ನೀಡುತ್ತಿದ್ದೇವೆ ಎಂದು ದ.ಕ ಹಾಲು ಉತ್ಪಾದಕ ಮಹಾ ಮಂಡಳದ ಅಧ್ಯಕ್ಷ ರವಿರಾಜ್ ಹೆಗ್ಡೆ ಹೇಳಿದರು.
ಅವರು ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ., ಉಡುಪಿ ಹಾಗೂ ಸಹಕಾರ ಇಲಾಖೆ ಇವರ ಸಂಯುಕ್ತಾಶ್ರದಲ್ಲಿ ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕಿನ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷ ಹಾಗೂ ಮುಖ್ಯ ಕಾರ್ಯನಿರ್ವಾಹಕರಿಗೆ ಉಡುಪಿಯ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸಂಘದಲ್ಲಿ ಕಾರ್ಯನಿರ್ವಹಣಾಧಿಕಾರಿ ಹಾಗು ಕಾರ್ಯದರ್ಶಿ ಸಹಕಾರಿಯ ಎರಡು ಕಣ್ಣುಗಳಿದ್ದಂತೆ. ಇವರು ಒಗ್ಗಟ್ಟಾಗಿ ಕಾರ್ಯನಿರ್ವಹಿಸಿದರೆ ಸಹಕಾರಿ ಸಂಘಗಳು ಬೆಳೆಯಲು ಸಾಧ್ಯ ಎಂದರು. ಹಾಲಿನ ಗುಣಮಟ್ಟ ಪರಿಶೀಲಿಸುವ ಜವಾಬ್ದಾರಿಯನ್ನು ಪರಿಶೀಲಿಸಲು ಏಪ್ರಿಲ್ ಒಂದರಿAದ ಸದಸ್ಯರಿಗೆ ಜವಾಬ್ದಾರಿಯನ್ನು ನೀಡುತ್ತಿದ್ದೇವೆ. ಈಗಾಗಲೇ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಹಾಲಿನ ಮಾನದಂಡ ಪರಿಶೀಲನೆಯಿಂದಾಗಿ ಉತ್ತಮ ಗುಣಮಟ್ಟದ ಹಾಲು ಸಾಧ್ಯವಾಗಲಿದೆ ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ದ.ಕ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ಇದರ ನಿರ್ದೇಶಕ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ ಮಾತನಾಡಿ, ಹೈನುಗಾರರ ಮುಖದಲ್ಲಿ ಮಂದಹಾಸ ಮೂಡಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪರಿಶ್ರಮದಿಂದ ಸಹಮತದಿಂದ ನಿರ್ಣಯ ಕೈಗೊಳ್ಳುತ್ತಿದ್ದೇವೆ. ಹಾಲಿಗೆ ಬೆಲೆ ಜಾಸ್ತಿ ಬರಬೇಕಾದರೆ ಗುಣಮಟ್ಟದ ಹಾಲು ನೀಡಬೇಕು. ಈ ನಿಟ್ಟಿನಲ್ಲಿ ಕಾರ್ಯನಿರ್ವಹಣಾಧಿಕಾರಿಗಳ ಕರ್ತವ್ಯ ಜವಾಬ್ದಾರಿಯುತವಾಗಿದ್ದು, ಹೈನುಗಾರರಿಗೆ ಗುಣಮಟ್ಟದ ಹಾಲು ನೀಡುವಂತೆ ಸಲಹೆ ಸೂಚನೆಗಳನ್ನು ನೀಡಿ, ಎಲ್ಲರನ್ನು ಪ್ರೀತಿ ವಿಶ್ವಾಸಕ್ಕೆ ತೆಗೆದುಕೊಳ್ಳುವ ಜವಾಬ್ದಾರಿ ಕಾರ್ಯನಿರ್ವಹಣಾಧಿಕಾರಿಗಳ ಅವರ ಮೇಲಿದೆ ಎಂದರು. ಹೈನುಗಾರಿಗೆ ಹೆಚ್ಚು ಸಹಕಾರ ನೀಡುವ ಉದ್ದೇಶದಿಂದ ಸಾಲ ನೀಡುವ ಮೂಲಕವೂ ಪ್ರೋತ್ಸಾಹ ನೀಡಲಾಗುತ್ತಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಮಾತನಾಡಿ, ರಾಜ್ಯದಲ್ಲಿ ಅನೇಕ ತಿದ್ದುಪಡಿಯಾಗುತ್ತಿದ್ದು, ವಿವಿಧೋದ್ದೇಶ ಕಾರ್ಯಕ್ರಮವನ್ನು ಮಾಡಲು ಸರ್ಕಾರ ಅವಕಾಶ ಕಲ್ಪಿಸಿದ್ದು, ಈ ಬಗ್ಗೆಯೂ ಕಾರ್ಯಪ್ರವೃತ್ತರಾಗಬೇಕು. ಅಲ್ಲದೇ ಸಹಕಾರಿ ಕ್ಷೇತ್ರದ ಅಸ್ತಿತ್ವಕ್ಕೆ ಧಕ್ಕೆ ಬಾರದಂತೆ ರೂಪುರೇಖೆಗಳನ್ನೂ ಸಿದ್ಧಪಡಿಸೋಣ ಎಂದು ಕರೆ ನೀಡಿದರು. ಶಿವಮೊಗ್ಗ ಸನ್ನದು ಲೆಕ್ಕಪರಿಶೋಧಕರಾದ ವರುಣ್ ಭಟ್, ಸಹಕಾರಿ ಮಹಾ ಮಂಡಳದ ಆಡಳಿತ ಮಂಡಳಿ ಸದಸ್ಯರಾದ ಸುರೇಶ್ ರಾವ್ ಉಪಸ್ಥಿತರಿದ್ದರು.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನ ಕಾರ್ಯನಿರ್ವಹಣಾಧಿಕಾರಿ ಅನುಷಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅಲೆವೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ಧನ್ಯವಾದ ಸಮರ್ಪಿಸಿದರು. ಅಕ್ಷತಾ ಪ್ರಾರ್ಥಿಸಿದರು.

.jpeg)