ನೌಕಾಪಡೆಯ ಹಡಗುಗಳ ರಹಸ್ಯ ಮಾಹಿತಿ ರವಾನೆ; 5ನೇ ಆರೋಪಿಯ ಬಂಧನ
Tuesday, February 17, 2026
ಉಡುಪಿಯ ಕೊಚ್ಚಿನ್ ಶಿಪ್ ಯಾರ್ಡ್ ನಿಂದ ನೌಕಾಪಡೆಯ ಹಡಗುಗಳ ರಹಸ್ಯ ಮಾಹಿತಿ ರವಾನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ 5ನೇ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪಶ್ಚಿಮಬಂಗಾಳ ಮೂಲದ, ಪ್ರಸ್ತುತ ಕೇರಳದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಆಲಿಫ್ ಇಸ್ಲಾಮ್ (21), ಬಂಧಿತ ಆರೋಪಿ. ನೌಕಾ ಪಡೆಯ ರಹಸ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಮಲ್ಪೆ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 128/2025, ಕಲಂ: 152, 61(1) BNS 2023 ಮತ್ತು ಕಲಂ: 3, 5 OFFICIAL SECRETS ACT 1923 ಮತ್ತು 18 Indiaʼs Unlawful Activities (prevention) Act(UAPA)ರಂತೆ ಪ್ರಕರಣ ದಾಖಲಾಗಿತ್ತು. ಈಗಾಗಲೇ 4ಮಂದಿಯನ್ನು ಬಂಧಿಸಲಾಗಿತ್ತು. ಇದೀಗ 5ನೇ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಫೆ. 21ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.