ಶಾಲಾ ಬಸ್ಸಿಗೆ ಮೀನು ಸಾಗಾಟ ವಾಹನ ಡಿಕ್ಕಿ; 7 ಮಂದಿ ವಿದ್ಯಾರ್ಥಿಗಳಿಗೆ ಗಾಯ
Monday, February 16, 2026
ಶಾಲಾ ಬಸ್ಸಿಗೆ ಮೀನು ಸಾಗಾಟದ ಕ್ಯಾಂಟರ್‌ವೊOದು ಹಿಂದಿನಿOದ ಢಿಕ್ಕಿ ಹೊಡೆದು ಏಳು ಮಂದಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳೂರಿನ ರಾಷ್ಟ್ರೀಯ ಹೆದ್ದಾರಿ 66ರ ಕಾಪಿಕಾಡು ಬಳಿ ಇಂದು ಬೆಳಿಗ್ಗೆ ಸುಮಾರು 8 ಗಂಟೆ ಸುಮಾರಿಗೆ ನಡೆದಿದೆ.
ತಲಪಾಡಿಯ ಶಾರದಾ ನಿಕೇತನ ಪಬ್ಲಿಕ್ ಸ್ಕೂಲ್ & ಕಾಲೇಜಿಗೆ ಸೇರಿದ ಬಸ್ಸು ಹೆದ್ದಾರಿ ಅಂಚಿನಲ್ಲಿ ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ತಲಪಾಡಿ ಕಡೆಗೆ ತೆರಳುತ್ತಿದ್ದ ವೇಳೆ, ಹಿಂದಿನಿOದ ಬಂದ ಮೀನಿನ ಕ್ಯಾಂಟರ್ ಬಸ್ಸಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದಿದೆ.
ಗೋವಾದಿಂದ ಕೇರಳ ಕಡೆಗೆ ಮೀನು ಸಾಗಿಸುತ್ತಿದ್ದ ಕುಂದಾಪುರ ಮೂಲದ ಚಾಲಕ ಸಂಜೀವ ನಿದ್ರಾಮಂಪರಿನಲ್ಲಿ ವಾಹನ ಚಲಾಯಿಸಿದ್ದರಿಂದ ಅಪಘಾತ ಸಂಭವಿಸಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಘಟನೆಯಲ್ಲಿ ಬಸ್ಸಿನಲ್ಲಿದ್ದ ನಾಲ್ಕು ವಿದ್ಯಾರ್ಥಿಗಳು ಹಾಗೂ ಮೂರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಗಾಯಾಳು ವಿದ್ಯಾರ್ಥಿಗಳಿಗೆ ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗಿದೆ. ಕಾಲಿಗೆ ಗಾಯಗೊಂಡ ವಿದ್ಯಾರ್ಥಿಯೊಬ್ಬರನ್ನು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತ ಸಂಭವಿಸಿದ ವೇಳೆ ಬಸ್ಸಿನಲ್ಲಿ ಒಟ್ಟು 24 ಮಂದಿ ವಿದ್ಯಾರ್ಥಿಗಳು ಇದ್ದರು ಎಂದು ತಿಳಿದು ಬಂದಿದೆ.