9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Sunday, February 15, 2026
ನ್ಯಾಯಾಲಯದಲ್ಲಿ ಷರತ್ತುಬದ್ದ ಜಾಮೀನು ಪಡೆದು ವಿಚಾರಣೆಗೆ ಹಾಜರಾಗದೇ ಸುಮಾರು 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪುತ್ತೂರು ನಗರ ಪೊಲೀಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಪುತ್ತೂರು ನಗರ ಪೊಲೀಸ್ ಠಾಣೆಯ ಅ.ಕ್ರ: 51/2012 ಹಾಗೂ ಅ.ಕ್ರ: 52/2012 ಪ್ರಕರಣಗಳಲ್ಲಿ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಪುತ್ತೂರು ಕಸಬಾ ಗ್ರಾಮದ ನಿವಾಸಿ ಅಬ್ಬಾಸ್ ಆಲಿ ಆಲ್ತಾಫ್ (55)ಎಂಬಾತನನ್ನು ಮಂಗಳೂರು l ಕುಲಶೇಖರದ ಬಿಕರ್ನಕಟ್ಟೆ ಪ್ರದೇಶದಲ್ಲಿ ದಸ್ತಗಿರಿ ಮಾಡಲಾಗಿದೆ. ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ಫೆ . 27ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ನ್ಯಾಯಾಲಯದಲ್ಲಿ ಷರತ್ತುಬದ್ದ ಜಾಮೀನು ಪಡೆದು ಬಳಿಕ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿರುವ ಹಿನ್ನೆಲೆಯಲ್ಲಿ ಆರೋಪಿತನ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 18/2026, ಕಲಂ 269 (BNS 2023)ರಡಿ ಮತ್ತೊಂದು ಪ್ರಕರಣ ದಾಖಲು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.