-->
 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್ ಬಂಧನ


ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿಶೀಟರ್‌ವೊಬ್ಬನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮOಗಳೂರಿನ ಹಳೆಯಂಗಡಿಯ ಕೊಪ್ಪಳ ನಿವಾಸಿ ಸಜ್ವಾನ್ ಹುಸೈನ್ (42) ಬಂಧಿತ ಆರೋಪಿ. ಮಂಗಳೂರು ಕಮಿಷನರೇಟ್ ಮತ್ತು ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ 2 ಕೊಲೆ, 4 ಕೊಲೆಯತ್ನ, ಗ್ಯಾಂಗ್ ರೇಪ್, 5 ದರೋಡೆ, ಅಪಹರಣ, ಸುಲಿಗೆ, ಪೊಲೀನ್ ಅಧಿಕಾರಿಗಳ ಮೇಲೆ ಹಲ್ಲೆ, ಕಳ್ಳತನ, ಸರಗಳ್ಳತನ, ಹಲ್ಲೆ, ಜೈಲಿನಲ್ಲಿ ಸಹ ಖೈದಿಗಳ ಮೇಲೆ ಹಲ್ಲೆ, ಅಕ್ರಮ ಕೂಟ ಸೇರಿ ಹಲ್ಲೆ, ಕೊಲೆ ಬೆದರಿಕೆ, ಕರ್ತವ್ಯಕ್ಕೆ ಅಡ್ಡಿ, ದರೋಡೆಗೆ ತಯಾರಿ ಮತ್ತು ಸಂಚು ಮುಂತಾದ ಅಪರಾಧಗಳಿಗೆ ಸಂಬAಧಿಸಿದ ಸುಮಾರು 31 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತ ಕಳೆದ 9 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ. 

ಈತನ ವಿರುದ್ಧ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2008 ರಲ್ಲಿ ದಾಖಲಾಗಿದ್ದ ಪ್ರವೀಣ್ ಎಂಬವರ ಅಪಹರಣ, ದರೋಡೆ ಮತ್ತು ಕೊಲೆ ಪ್ರಕರಣದಲ್ಲಿ 2020ರ ಫೆ. 28 ರಂದು ಹೈಕೋರ್ಟ್ ನಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದಾನೆ. ಅಲ್ಲದೇ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ 2008 ರಲ್ಲಿ ದರೋಡೆ ಪ್ರಕರಣದಲ್ಲಿ ನ್ಯಾಯಾಲಯದಿಂದ 3 ವರ್ಷ ಶಿಕ್ಷೆಗೆ ಒಳಗಾಗಿದ್ದ. ಈತನ ವಿರುದ್ಧ 12 ಪ್ರಕರಣಗಳು ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿ ಬಾಕಿ ಇದ್ದು, ನ್ಯಾಯಾಲಯದಿಂದ ದಸ್ತಗಿರಿ ವಾರೆಂಟ್ ಗಳನ್ನು ಹೊರಡಿಸಲಾಗಿರುತ್ತದೆ.

5 ಪ್ರಕರಣಗಳಲ್ಲಿ ನ್ಯಾಯಾಲಯವು ಎಲ್.ಪಿ.ಸಿ ಎಂದು ಘೋಷಿಸಲಾಗಿದೆ. 2017 ನೇ ಇಸವಿಯಲ್ಲಿ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನು ತನ್ನ ಸಹಚರರೊಂದಿಗೆ ಸೇರಿಕೊಂಡು ಲೆಕ್ಕಿ ಸಹ್ವಾನ್ ಎಂಬಾತನನ್ನು ಅಪಹರಿಸಿ ಹಲ್ಲೆ ನಡೆಸಿ, ಕೊಲೆ ಮಾಡಿ ಆಗುಂಬೆ ಘಾಟಿಯಲ್ಲಿ ಎಸೆದ ಪ್ರಕರಣದಲ್ಲಿ ನೇರ ಭಾಗಿಯಾಗಿ ಬಳಿಕ ದಸ್ತಗಿರಿಗೆ ಸಿಗದೇ ತಲೆಮರೆಸಿಕೊಂಡಿದ್ದನು. ಆಂದ್ರಪ್ರದೇಶದ ರಾಯ್ ಚೋಟೆ ಪ್ರದೇಶದಲ್ಲಿ ತನ್ನ ಹೆಸರನ್ನು, ಉಮ್ಮರ್ ಮೊಹಮ್ಮದ್ ನಾಸಿರ್ ಎಂದು ಬದಲಿಸಿ ನಕಲಿ ಹೆಸರಿನಲ್ಲಿ ಆಧಾರ್ ಕಾರ್ಡ್, ಪಾಸ್ ಪೋರ್ಟ್ ಮಾಡಿಸಿಕೊಂಡು, 2018 ರಿಂದ ವಿದೇಶಕ್ಕೆ ಪರಾರಿಯಾಗಿ ತಲೆಮರೆಸಿಕೊಂಡಿದ್ದನು. ವಿದೇಶಗಳಲ್ಲಿನ ಮಂಗಳೂರು ಮೂಲದ ವಾಪಾರಸ್ಥರಿಗೆ ಸಹ ಬಲ ಹಣ ಮಾಡಿದ ಬಗ್ಗೆ ದೂರುಗಳು ಬಂದಿರುತ್ತದೆ.

ಆರೋಪಿ ಸಪ್ತಾನ್ ಹುಸೈನ್ ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರು ಅಂದ್ರಪ್ರದೇಶ ರಾಯಚೋಟೆಯಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮುಲ್ಕಿ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ. ಆರೋಪಿ ಸಬ್ಬಾನ್ ಹುಸೈನ್ ಗೆ ತಲೆಮರೆಸಿಕೊಳ್ಳಲು ನಕಲಿ ದಾಖಲೆ, ಪಾಸ್ ಪೋರ್ಟ್ ತಯಾರಿಸಲು ಸಹಕರಿಸಿದ ಮತ್ತು ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪತ್ತೆಮಾಡಿ ತನಿಖೆಗೆ ಒಳಪಡಿಸಲಾಗುವುದು ಹಾಗೂ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. 

Ads on article

Advertise in articles 1

advertising articles 2

Advertise under the article