-->
ವಕೀಲರೊಬ್ಬರ ಮನೆಗೆ ನುಗ್ಗಿದ ಕಳ್ಳರು; ದಾಖಲೆ ಪತ್ರಗಳ ಕಳ್ಳತನ

ವಕೀಲರೊಬ್ಬರ ಮನೆಗೆ ನುಗ್ಗಿದ ಕಳ್ಳರು; ದಾಖಲೆ ಪತ್ರಗಳ ಕಳ್ಳತನ



ವಕೀಲರೊಬ್ಬರ ಮನೆಗೆ ನುಗ್ಗಿದ ಕಳ್ಳರು ದಾಖಲೆಪತ್ರಗಳನ್ನು ಕಳವುಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದ ಒಕ್ಕೆತ್ತೂರು ರೋಯಲ್ ವಿಲ್ಲಾ ಸಮೀಪ ನಡೆದಿದೆ. 

ಅಡ್ವಕೇಟ್ ಸಫಿಯಾ ನೌಫಲ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಮನೆ ಮಂದಿ ಒಂದು ತಿಂಗಳ ಹಿಂದೆ ವಿದೇಶಕ್ಕೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಳ್ಳರು ಮನೆಯ ಬಾಗಿಲು ಮುರಿದು ಒಳನುಗ್ಗಿದ್ದಾರೆ. ಚಿನ್ನಾಭರಣಕ್ಕಾಗಿ ತಡಕಾಡಿದ್ದು ಏನು ಸಿಗದಿದ್ದಾಗ ದಾಖಲೆ ಪತ್ರಗಳನ್ನು ಕಳವುಗೈದಿದ್ದಾರೆ.

Ads on article

Advertise in articles 1

advertising articles 2

Advertise under the article