-->
ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರ ಬಂಧನ

ಅಂತರ್ ಜಿಲ್ಲಾ ಬೈಕ್ ಕಳ್ಳರಿಬ್ಬರ ಬಂಧನ


ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬೈಕ್ ಕಳವು ಪ್ರಕರಣವನ್ನು ಪೊಲೀಸರು ಚಾಕಚಕ್ಯತೆಯಿಂದ ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಡಗುಬೆಟ್ಟು ಗ್ರಾಮದ ರಾಹುಲ್‌ನಗರದಲ್ಲಿ ಬೈಕ್ ಕಳ್ಳತನ ನಡೆದ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 28/2026, ಕಲಂ 303(2) ಬಿ.ಎನ್.ಎಸ್. ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡಿದ್ದರು.

ಕಾರ್ಯಾಚರಣೆಯಲ್ಲಿ ಶರತ್ (26) ಹಾಗೂ ಗಣೇಶ್ (31) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆರೋಪಿಗಳ ವಿರುದ್ಧ ಮಣಿಪಾಲ, ಉಡುಪಿ ನಗರ, ಭದ್ರಾವತಿ, ಕೊಪ್ಪ, ತೀರ್ಥಹಳ್ಳಿ, ಮಡಿಕೇರಿ ಹಾಗೂ ತುಮಕೂರು ಎಕ್ಸ್ಟೆನ್ಶನ್ ಪೊಲೀಸ್ ಠಾಣೆಗಳಲ್ಲಿ 11ಕ್ಕೂ ಅಧಿಕ ಕಳವು ಪ್ರಕರಣಗಳು ದಾಖಲಾಗಿವೆ. ಆರೋಪಿಗಳು ಹಲವೆಡೆ ಬೈಕ್ ಕಳವು ಪ್ರಕರಣಗಳಲ್ಲಿ ತೊಡಗಿಸಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣದ ಮುಂದಿನ ತನಿಖೆಯನ್ನು ಮಣಿಪಾಲ ಪೊಲೀಸರು ಮುಂದುವರಿಸಿದ್ದಾರೆ.

Ads on article

Advertise in articles 1

advertising articles 2

Advertise under the article