-->
 ಸಾಮಾಜಿಕ ಮಾಧ್ಯಮ ಪೋಸ್ಟ್ ಗಳ ವಿರುದ್ಧ ಎಫ್‌ಐಆರ್: ಡಿಜಿಪಿ ಮಾರ್ಗಸೂಚಿ

ಸಾಮಾಜಿಕ ಮಾಧ್ಯಮ ಪೋಸ್ಟ್ ಗಳ ವಿರುದ್ಧ ಎಫ್‌ಐಆರ್: ಡಿಜಿಪಿ ಮಾರ್ಗಸೂಚಿ


ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಗೆ ಸಂಬOಧಿಸಿದOತೆ ಪ್ರಕರಣ ದಾಖಲಿಸುವಾಗ ಪ್ರಾಥಮಿಕ ತನಿಖೆ ನಡೆಸಬೇಕೆಂದು ಪೊಲೀಸ್ ಮಹಾನಿರ್ದೇಶಕರ ಕಚೇರಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿಯೂ ಇದನ್ನು ಪಾಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ. 

ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಗೆ ಸಂಬOಧಿಸಿದOತೆ "ಪ್ರಾಥಮಿಕ ವಿಚಾರಣೆ ನಡೆಸದೆ ಏಕಾಏಕಿ" ಎಫ್‌ಐಆರ್‌ಗಳನ್ನು ದಾಖಲಿಸಲಾಗುತ್ತಿದೆ ಎಂಬುದನ್ನು ಗಮನಿಸಿದ ನಂತರ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಎಂ ಎ ಸಲೀಮ್ ಅವರು ಸೋಮವಾರ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಿದ್ದಾರೆ.

ಈ ಸಂಬOಧ ಫೆಬ್ರವರಿ 7 ರಂದು ಪೊಲೀಸ್ ಮಹಾನಿರ್ದೇಶಕರ ಕಚೇರಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಲ್ಲಿಯೂ ಇದನ್ನು ಪಾಲನೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ.

ಮಾರ್ಚ್ 28, 2025 ರಂದು ಸುಪ್ರೀಂ ಕೋರ್ಟ್, ಕರಣವೊಂದರಲ್ಲಿ ನೀಡಿದ ನಿರ್ದೇಶನಗಳನ್ನು ಪಾಲಿಸುವಂತೆ ರಾಜ್ಯದ ಎಲ್ಲ ಪೊಲೀಸ್ ಅಧಿಕಾರಿಗಳಿಗೆ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಗೆ ಸಂಬOಧಿಸಿದ ಎಫ್‌ಐಆರ್‌ಗಳನ್ನು ಏಕಾಏಕಿ ದಾಖಲಿಸುವುದು ಮತ್ತು ಬಂಧನಗಳನ್ನು ತಪ್ಪಿಸಲು ರಾಜ್ಯದ ಪೊಲೀಸ್ ಅಧಿಕಾರಿಗಳಿಗೆ ಈ ಮಾರ್ಗಸೂಚಿಗಳನ್ನು ಪಾಲಿಸಲು ಸೂಚಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಸುತ್ತೋಲೆಯ ಪ್ರಕಾರ, ಸಾಮಾಜಿಕ ಮಾಧ್ಯಮ ಪೋಸ್ಟ್ಗಳಿಗೆ ಸಂಬOಧಿಸಿದOತೆ ಯಾವುದೇ ದೂರು ಅಥವಾ ಮಾಹಿತಿಯನ್ನು ಸ್ವೀಕರಿಸಿದಾಗ, ಪೊಲೀಸರು ಪ್ರಾಥಮಿಕ ತನಿಖೆ ನಡೆಸಬೇಕು. ಮಾನಹಾನಿ ಅಥವಾ ಅಂತಹುದೇ ಪ್ರಕರಣಗಳಲ್ಲಿ ದೂರು ನೀಡುವವರು ಕಾನೂನಿನ ಪ್ರಕಾರ 'ನೊಂದ ವ್ಯಕ್ತಿ' ಆಗಿರಬೇಕು. ಸಂಬOಧವಿಲ್ಲದ ಮೂರನೇ ವ್ಯಕ್ತಿ ನೀಡುವ ದೂರುಗಳನ್ನು (ಗಂಭೀರ ಅಪರಾಧಗಳನ್ನು ಹೊರತುಪಡಿಸಿ) ಸ್ವೀಕರಿಸಬಾರದು. 

Ads on article

Advertise in articles 1

advertising articles 2

Advertise under the article