ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು
Monday, February 02, 2026
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಕುಂದಾಪುರದ ತೆಕ್ಕಟ್ಟೆಯ ರಾ.ಹೆ.66ರ ಕೆನರಾ ಬ್ಯಾಂಕ್ ಎದುರು ನಡೆದಿದೆ.
ತೆಕ್ಕಟ್ಟೆ ರಾ.ಹೆ.66ರ ಎಡಭಾಗದ ಬಣ್ಣದಬೈಲು ಸಂಪರ್ಕ ಕಲ್ಪಿಸುವ ಒಳರಸ್ತೆಗೆ ಕಾರನ್ನು ತಿರುಗಿಸುತ್ತಿರುವ ಸಂದರ್ಭದಲ್ಲಿ ಹಿಂದಿನಿOದ ಬಂದ ಇನ್ನೊಂದು ಕಾರು ಚಾಲಕನ ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನ ಏರ್ ಬ್ಯಾಗ್ ತೆರೆದಿದ್ದು ರಸ್ತೆಯ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಘಟನೆಯಿಂದ ಎರಡು ವಿದ್ಯುತ್ ಕಂಬಗಳು ತುಂಡಾಗಿದೆ.
ಘಟನೆಯ ತೀವ್ರತೆಗೆ ಒಂದು ಕಾರಿನ ಹಿಂಬದಿ ಸಂಪೂರ್ಣ ಜಖಂಗೊOಡಿದ್ದು, ಎರಡು ಟಯರ್ ಗಳು ಸಿಡಿದಿದೆ. ಮತ್ತೊಂದು ಕಾರಿನ ಚಾಲಕ ಕುಂದಾಪುರದ ನರಸಿಂಹ ಹೊಳ್ಳ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಘಟನೆ ಸಂಭವಿಸುತ್ತಿದ್ದOತೆ ಕೋಟ ಪೊಲೀಸ್ ಸ್ಥಳಕ್ಕೆ ಧಾವಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.
