-->
 ಬ್ಯಾಲೆಟ್ ಪೇಪರ್‌ನಲ್ಲಿ ಗ್ರಾ.ಪಂ ಚುನಾವಣೆ ನಡೆಸಲು ನಿರ್ಧಾರ

ಬ್ಯಾಲೆಟ್ ಪೇಪರ್‌ನಲ್ಲಿ ಗ್ರಾ.ಪಂ ಚುನಾವಣೆ ನಡೆಸಲು ನಿರ್ಧಾರ


ಗ್ರಾಮ ಪಂಚಾಯತ್ ಚುನಾವಣೆಯನ್ನು ಬ್ಯಾಲೆಟ್ ಪೇಪರ್‌ನಲ್ಲಿ ನಡೆಸಲು ಸಚಿವ ಸಂಪುಟ ಸಭೆ ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ.

ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ಪಾಲಿಕೆಗಳ ಮಾದರಿಯಲ್ಲೇ ಗ್ರಾಮ ಪಂಚಾಯತ್, ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯಲ್ಲೂ ಎಲೆಕ್ಟ್ರಾನಿಕ್ ಮತಯಂತ್ರ ಬದಲಿಗೆ ಮತಪತ್ರ (ಬ್ಯಾಲೆಟ್ ಪೇಪರ್) ಬಳಕೆಗೆ ಅವಕಾಶ ಕಲ್ಪಿಸುವ ‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ ತಿದ್ದುಪಡಿ ಮಸೂದೆ-2026’ಕ್ಕೆ ಸಂಪುಟ ಅನುಮೋದನೆ ನೀಡಿದೆ. 

ಗುರುವಾರ ನಡೆದ ಸಂಪುಟ ಸಭೆಯಲ್ಲಿ ಪಂಚಾಯತ್ ಚುನಾವಣೆಯಲ್ಲೂ ಬ್ಯಾಲೆಟ್ ಪೇಪರ್ ಬಳಕೆ ಬಗ್ಗೆ ವಿಸ್ತೃತ ಚರ್ಚೆ ನಡೆಯಿತು. ಬಳಿಕ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಲಾಯಿತು. ಬಹುತೇಕ ಗ್ರಾಮ ಪಂಚಾಯತ್‌ಗಳ ಅಧಿಕಾರಾವಧಿ ಇದೇ ಫೆಬ್ರವರಿ-ಮಾರ್ಚ್ನಲ್ಲಿ ಮುಗಿಯಲಿದೆ. ಹೀಗಾಗಿ ಚುನಾವಣೆ ನಡೆಯುವವರೆಗೂ ಸರ್ಕಾರ ಆಡಳಿತಾಧಿಕಾರಿಗಳ ನೇಮಕಕ್ಕೆ ಆದೇಶ ಹೊರಡಿಸಿದೆ.ಮತ್ತೊಂದೆಡೆ 2026ರ ಏಪ್ರಿಲ್-ಮೇ ತಿಂಗಳಲ್ಲಿ ಚುನಾವಣೆ ನಡೆಸಲು ಸರ್ಕಾರ ಸಿದ್ಧತೆ ನಡೆಸಿದ್ದು, ಈ ಸಂಬAಧ ಜಿಲ್ಲಾಧಿಕಾರಿಗಳಿಗೆ ಪೂರ್ವಸಿದ್ಧತೆಗೆ ನಿರ್ದೇಶನ ನೀಡಲಾಗಿದೆ.


Ads on article

Advertise in articles 1

advertising articles 2

Advertise under the article