ಶೆಟ್ರಕಟ್ಟೆ ಬಸ್ ದುರಂತದ ಗಾಯಾಳು ವಿದ್ಯಾರ್ಥಿನಿಯರಿಗೆ ಕಾಲೇಜಿನಿಂದ ಸಹಾಯಧನ
Wednesday, February 04, 2026
ಉಡುಪಿ ಜಿಲ್ಲೆಯ ಕುಂದಾಪುರದ ಶೆಟ್ರಕಟ್ಟೆ ಬಳಿ ನಡೆದ ಬಸ್ ಅಪಘಾತದಲ್ಲಿ ಗಾಯಗೊಂಡ ಕುಂದಾಪುರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಚೈತ್ರಾ ಹಾಗೂ ಅರ್ಚನಾ ಅವರಿಗೆ ಕಾಲೇಜಿನ ವತಿಯಿಂದ ಆರ್ಥಿಕ ಸಹಾಯಧನ ನೀಡಲಾಗಿದೆ.
ಅಪಘಾತದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರ ಚಿಕಿತ್ಸಾ ವೆಚ್ಚಕ್ಕೆ ನೆರವಾಗುವ ಉದ್ದೇಶದಿಂದ ಕಾಲೇಜಿನ ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕರು, ಅಧ್ಯಾಪಕರು, ಸಿಬ್ಬಂದಿ ವರ್ಗದವರು ಹಾಘೂ ವಿದ್ಯಾರ್ಥಿಗಳು ಒಟ್ಟಾಗಿ ರೂ.2,50,000 ಮೊತ್ತವನ್ನು ಸಂಗ್ರಹಿಸಿದ್ದಾರೆ. ಈ ಮೊತ್ತವನ್ನು ತಲಾ ರೂ.1,25,000 ದಂತೆ ಇಬ್ಬರು ವಿದ್ಯಾರ್ಥಿನಿಯರ ಪೋಷಕರಿಗೆ ಹಸ್ತಾಂತರಿಸಲಾಗಿದೆ.
ವಿದ್ಯಾರ್ಥಿನಿಯರ ಆರೋಗ್ಯ ಸುಧಾರಣೆಗಾಗಿ ಕಾಲೇಜು ಕುಟುಂಬಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಕಾಲೇಜು ಆಡಳಿತ ಭರವಸೆ ನೀಡಿದೆ.
