ಎಂ.ಡಿ.ಎಂ.ಎ ಮಾರಾಟಕ್ಕೆ ಯತ್ನ; ಆರೋಪಿಯ ಬಂಧನ
Monday, February 09, 2026
ಮಂಗಳೂರಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬಾಳೆಪುಣಿ ಗ್ರಾಮದ ನವಗ್ರಾಮ ಸೈಟ್ ನಾರ್ಯಗುತ್ತು ಗುಡ್ಡ ಪ್ರದೇಶದಲ್ಲಿ ನಿಷೇಧಿತ ಎಮ್.ಡಿ.ಎಮ್.ಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಶ್ರೀರಂಗಪಟ್ಟಣ ಹುಲಿಕೆರೆ ನಿವಾಸಿ ಜೋರ್ಡನ್(21) ಎಂದು ಗುರುತಿಸಲಾಗಿದೆ. ಈತ ಪ್ರಸ್ತುತ ಬಾಳೆ ಪುಣೆ ಗ್ರಾಮದ ಕುಕ್ಕುದ ಕಟ್ಟೆ ಸೈಟ್ ನಲ್ಲಿ ರುವ ಸೆಫಿಯಾ ಎಂಬವರ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ಬಂಧಿತನಿಂದ 55 ಗ್ರಾಂ ಎಮ್ ಡಿಎಮ್ ಎ ಮಾದಕ ವಸ್ತು, ಒಂದು ಮೊಬೈಲ್ ಫೋನ್, ಡಿಜಿಟಲ್ ತೂಕದ ಮಾಪನ ಯಂತ್ರ ಸಹಿತ ಇತರ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.