-->
 ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್


ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ನಾಟಕಕಾರ, ಯಕ್ಷಗಾನ ಕಲಾವಿದ, ವೈದ್ಯ, ಸಂಘಟಕ, ಸಾಹಿತಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆಯಾಗಿದ್ದಾರೆ. 

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ ಸಾಹಿತ್ಯ ಸಮ್ಮೇಳನವು ಮೇ 3ರಂದು ಉಡುಪಿಯ ಯಕ್ಷಗಾನ ಕಲಾರಂಗದ ಹವಾ ನಿಯಂತ್ರಿತ ಸಭಾಂಗಣದಲ್ಲಿ ನಡೆಯಲಿದೆ. ಉಡುಪಿ ತಾಲೂಕು ಕಸಾಪ ಅಧ್ಯಕ್ಷ ರವಿರಾಜ್ ಎಚ್ .ಪಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಡಾ. ಭಾಸ್ಕರಾನಂದ ಕುಮಾರ್ ಅವರನ್ನು ಆಯ್ಕೆ ಮಾಡಲಾಯಿತು ಎಂದು ಗೌರವ ಕಾರ್ಯದರ್ಶಿಗಳಾದ ಜನಾರ್ದನ್ ಕೊಡವೂರು, ರಂಜಿನಿ ವಸಂತ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

Ads on article

Advertise in articles 1

advertising articles 2

Advertise under the article