ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಅವಘಡ; ಚಾಲಕ ಪಾರು
Monday, February 09, 2026
ಮಂಗಳೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಸಮೀಪ ಚಲಿಸುತ್ತಿದ್ದ ಕಾರಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ.
ಕಾರಿನ ಎಂಜಿನ್ ಭಾಗದಿಂದ ಹೊಗೆ ಹಾಗೂ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಕಾರಿನಿಂದ ಇಳಿದು ಸುರಕ್ಷಿತವಾಗಿ ಪಾರಾಗಿದ್ದಾರೆ .ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ತ್ವರಿತವಾಗಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬೆಂಕಿ ಅವಘಡದಿಂದ ಕಾರು ಅರ್ಧ ಸುಟ್ಟು ಹೋಗಿದೆ.