ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನಾಚರಣೆ
Friday, February 20, 2026
ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನಾಚರಣೆಯನ್ನು ಆಚರಿಸಲಾಯಿತು.
ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಮಕ್ಕಳು, ಅವರ ಪಾಲಕರು ಹಾಗೂ ಕ್ಯಾನ್ಸರ್ ಜಯಿಸಿದವರು ಕಾರ್ಯಕ್ರಮದಲ್ಲಿ ಭಾಗವಹಿಸಿ ಜಾಗೃತಿ ಮೂಡಿಸಿದರು. 2024- 2026ರ ಅವಧಿಗೆ ರೂಪಿಸಲಾದ ಮೂರು ವರ್ಷದ ಅಭಿಯಾನದ ಭಾಗವಾಗಿ “ಇನ್ಸ್ಪೈರಿಂಗ್ ಆಕ್ಷನ್” ಧ್ಯೇಯವಾಕ್ಯದಡಿ ಈ ಕಾರ್ಯಕ್ರಮ ಆಯೋಜಿಸಲಾಯಿತು.
ಬಾಲ್ಯ ಕ್ಯಾನ್ಸರ್ ವಿರುದ್ಧದ ಹೋರಾಟದಲ್ಲಿ ಸಮುದಾಯದ ಪಾತ್ರ ಮಹತ್ವದ್ದೆಂದು ಡಾ. ಅನಿಲ್ ಕೆ. ಭಟ್ ಹೇಳಿದರು. ಸಮಯಕ್ಕೆ ಸರಿಯಾದ ಪತ್ತೆ ಹಾಗೂ ಸೂಕ್ತ ಚಿಕಿತ್ಸೆ ನೀಡಿದರೆ ಬಾಲ್ಯ ಕ್ಯಾನ್ಸರ್ ಸಂಪೂರ್ಣ ಗುಣಮುಖವಾಗಬಹುದು ಎಂದು ಮಕ್ಕಳ ಕ್ಯಾನ್ಸರ್ ವಿಭಾಗದ ಮುಖ್ಯಸ್ಥ ಡಾ. ವಾಸುದೇವ ಭಟ್ ಕೆ. ತಿಳಿಸಿದರು.
ಈ ಸಂದರ್ಭದಲ್ಲಿ ಕೆಎಂಸಿ ಮಣಿಪಾಲದ ಡೀನ್ ಡಾ. ಅನಿಲ್ ಕೆ. ಭಟ್, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅವಿನಾಶ ಶೆಟ್ಟಿ, ನರ್ಸಿಂಗ್ ಮುಖ್ಯಸ್ಥೆ ಡಾ. ಸುಬಾ ಸೂರಿಯಾ, ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಅರ್ಜುನ್ ಭಂಡಾರ್ಕರ್ ಹಾಗೂ ಲಯನ್ಸ್ ಕ್ಲಬ್ ಮಣಿಪಾಲದ ಅಧ್ಯಕ್ಷ ಡಾ. ನಿಶಾಂತ್ ಬಿ. ಭಟ್ ಉಪಸ್ಥಿತರಿದ್ದರು. ಬಳಿಕ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳ ಮನೋಬಲ ಹೆಚ್ಚಿಸುವ ಉದ್ದೇಶದಿಂದ ಮನರಂಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
.jpeg)