-->
 ಪಿಯುಸಿ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ

ಪಿಯುಸಿ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ


ಸ್ಕೂಟರ್‌ನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿಯನ್ನು ಕಾರಿನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಅಪಹರಣ ಮಾಡಲು ಯತ್ನಿಸಿ, ಚೂರಿಯಿಂದ ಹಲ್ಲೆ ನಡೆಸಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ.

ಬೆಳ್ತಂಗಡಿ ನಗರದ ಸುದೇಮುಗೇರು ನಿವಾಸಿಯಾಗಿರುವ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಫೆಬ್ರವರಿ 9ರಂದು ಬೆಳಗ್ಗೆ ಸುಮಾರು 8.30ರ ವೇಳೆಗೆ ಸ್ಕೂಟರ್‌ನಲ್ಲಿ ಸಂತೆಕಟ್ಟೆಗೆ ಬಸ್ ಹಿಡಿಯಲು ತೆರಳುತ್ತಿದ್ದ ವೇಳೆ, ನಂಬರ್ ಪ್ಲೇಟ್‌ಗೆ ಬಟ್ಟೆ ಕಟ್ಟಿದ ಕಾರಿನಲ್ಲಿ ಬಂದ ಮೂವರು ದುಷ್ಕರ್ಮಿಗಳು ಆಕೆಯ ಸ್ಕೂಟರ್‌ಗೆ ಅಡ್ಡಗಟ್ಟಿ ಕಾರಿನೊಳಗೆ ಎಳೆದು ತರುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗಿದೆ. ಈ ವೇಳೆ ಬಾಲಕಿ ಬೊಬ್ಬೆ ಹೊಡೆದು ತೀವ್ರವಾಗಿ ವಿರೋಧ ವ್ಯಕ್ತಪಡಿಸಿ ತಪ್ಪಿಸಿಕೊಂಡಿದ್ದಾಳೆ. ಹಿಂಭಾಗದಿOದ ಮತ್ತೊಂದು ಸ್ಕೂಟರ್ ಬರುತ್ತಿರುವುದನ್ನು ಗಮನಿಸಿದ ದುಷ್ಕರ್ಮಿಗಳು, ಚೂರಿಯಿಂದ ಬಾಲಕಿಯ ಕೈ ಹಾಗೂ ಬೆರಳಿಗೆ ಚುಚ್ಚಿ ಕಾರಿನೊಂದಿಗೆ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಗಾಯಗೊOಡ ವಿದ್ಯಾರ್ಥಿನಿಯನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಳ್ತಂಗಡಿ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯಿಂದ ಮಾಹಿತಿ ಪಡೆದು ತನಿಖೆಯನ್ನು ಚುರುಕುಗೊಳಿಸಿದ್ದಾರೆ. 


Ads on article

Advertise in articles 1

advertising articles 2

Advertise under the article