-->
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಪ ಲೋಕಾಯುಕ್ತ ನ್ಯಾ.ಬಿ. ವೀರಪ್ಪ ಭೇಟಿ

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಉಪ ಲೋಕಾಯುಕ್ತ ನ್ಯಾ.ಬಿ. ವೀರಪ್ಪ ಭೇಟಿ


ಉಡುಪಿ ಶ್ರೀ ಕೃಷ್ಣ ಮಠಕ್ಕೆ  ಉಪ ಲೋಕಾಯುಕ್ತ ನ್ಯಾ.ಬಿ. ವೀರಪ್ಪ ಭೇಟಿ ನೀಡಿ, ದೇವರ ದರ್ಶನ ಪಡೆದರು.


ಕುಟುಂಬ ಸಮೇತರಾಗಿ ಭೇಟಿ ನೀಡಿದ ನ್ಯಾ. ಬಿ. ವೀರಪ್ಪ ಅವರು ಕನಕನ ಕಿಂಡಿಯ ಮೂಲಕ ದೇವರ ದರ್ಶನ ಪಡೆದರು. ಅಲ್ಲಿಂದ ಶ್ರೀಕೃಷ್ಣ ಮಠದೊಳಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಪರ್ಯಾಯ ಪೀಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರನ್ನು ಭೇಟಿಯಾಗಿ, ಫಲ ಮಂತ್ರಾಕ್ಷತೆ ಪಡೆದರು. 


ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್  ಸರಳತ್ತಾಯ ಹಾಗೂ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಉಪಸ್ಥಿತರಿದ್ದರು.


Ads on article

Advertise in articles 1

advertising articles 2

Advertise under the article