ಡಾ. ಕೆ.ವಿ.ರಾವ್ ಅವರಿಗೆ ಜೀವಮಾನ ಸಾಧನಾ ಪ್ರಶಸ್ತಿ
Wednesday, February 04, 2026
ಮಂಗಳೂರಿನ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ವಿ.ರಾವ್ ಅವರಿಗೆ ವಿಜ್ಞಾನ ಮತ್ತು ಶಿಕ್ಷಣಕ್ಕಾಗಿ ಅವರ ಸೇವೆಯನ್ನು ಪರಿಗಣಿಸಿ ಭಾರತೀಯ ಭೌತಶಾಸ್ತ್ರ ಅಧ್ಯಾಪಕರ ಸಂಘವು ಜೀವಮಾನ ಸಾಧನಾ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ಬೆಂಗಳೂರಿನ ಆರ್.ವಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ 'ಕ್ವಾಂಟಂ ವಿಜ್ಞಾನ ಮತ್ತು ತಂತ್ರಜ್ಞಾನ' ಸಮ್ಮೇಳನದ ಸಂದರ್ಭದಲ್ಲಿ ಡಾ. ಕೆ.ವಿ.ರಾವ್ ಅವರು ವಿವಿಧ ಜವಾಬ್ದಾರಿಯುತ ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿರುತ್ತಾರೆ. ಕರ್ತವ್ಯ ನಿರ್ವಹಿಸಿದ ಎಲ್ಲಾ ಶೈಕ್ಷಣಿಕ ಕ್ಷೇತ್ರಗಳಲ್ಲಿ ವಿಜ್ಞಾನ ಸಂವಹನದ ನಾನಾ ಆಯಾಮಗಳ ಕಾರ್ಯಕ್ರಮಗಳ ಮೂಲಕ ಮಾಡಿರುವ ಸೇವೆಗೆ ಈ ಜೀವಮಾನ ಸಾಧನಾ ಪ್ರಶಸ್ತಿ ನೀಡಲಾಗಿದೆ.