-->
 ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; ಸರ ಎಗರಿಸಿ ಪರಾರಿಯಾಗುತ್ತಿದ್ದ ಕಳ್ಳರ ಬಂಧನ

ಪೊಲೀಸರ ಕ್ಷಿಪ್ರ ಕಾರ್ಯಾಚರಣೆ; ಸರ ಎಗರಿಸಿ ಪರಾರಿಯಾಗುತ್ತಿದ್ದ ಕಳ್ಳರ ಬಂಧನ


ಉಡುಪಿಯ ಶಿರ್ವ ಠಾಣಾ ವ್ಯಾಪ್ತಿಯಲ್ಲಿ ವೃದ್ಧೆಯ ಚಿನ್ನದ ಸರ ಎಗರಿಸಿ ಪರಾರಿಯಾಗುತ್ತಿದ್ದ ಮೂವರು ಸರಗಳ್ಳರನ್ನು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಪೊಲೀಸರು ಬಂಧಿಸಿದ್ದಾರೆ. 

ಬೈಕಿನಲ್ಲಿ ಉಡುಪಿಯಿಂದ ಬೈಂದೂರು ಕಡೆಗೆ ತೆರಳುತ್ತಿದ್ದ ಸರಗಳ್ಳರನ್ನು ಶಿರೂರು ಟೋಲ್ ಗೇಟ್ ನಲ್ಲಿ ವಶಕ್ಕೆ ಪಡೆಯಲಾಗಿದೆ. ಬೈಂದೂರು ಠಾಣೆ ಹಾಗೂ ಗಂಗೊಳ್ಳಿ ಠಾಣಾ ಪೊಲೀಸರು ಸರಗಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಶಂಕರಪುರದಲ್ಲಿ ಬಾಡಿಗೆ ಮನೆ ಕೇಳುವ ನೆಪದಲ್ಲಿ ಬಂದ ಮೂವರು ಯುವಕರು ವೃದ್ಧೆ ಹೆಲೆನ್ ಡಿಸೋಜಾ ಅವರ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದರು. ತಕ್ಷಣ ಕಾರ್ಯಾಪ್ರವೃತ್ತರಾದ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧರಿಸಿ ಕಾರ್ಯಾಚರಣೆ ನಡೆಸಿದ್ದಾರೆ. 


Ads on article

Advertise in articles 1

advertising articles 2

Advertise under the article